ಕರಾವಳಿ

ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ

Avg

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ಪ್ರಕೃತಿಯನ್ನು ಉಳಿಸಿ, ಮುಂದಿನ ಪೀಳಿಗೆಗೆ ಮಾದರಿಯಾಗುವ ಉದ್ದೇಶದಿಂದ ಗಿಡ ವಿತರಣೆ ಮತ್ತು ನೆಡುವ ಕಾರ್ಯಕ್ರಮ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯಿತು.

maithri

jaya-karnataka

ವಿಟ್ಲ ಸಮುದಾಯ ಅರೋಗ್ಯ ಕೇಂದ್ರದ ಮೆಡಿಕಲ್ ಆಫೀಸರ್ ಡಾ. ಶಮನ್  ಜೆ ಶೆಟ್ಟಿಯವರಿಗೆ ಗಿಡ ನೀಡಲಾಯಿತು. ವಿಟ್ಲ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗರವರಿಗೆ ಗಿಡ ವಿತರಿಸಿ, ಬಳಿಕ ಠಾಣೆಯ ಪರಿಸರದಲ್ಲಿ ಗಿಡ ನೆಡಲಾಯಿತು.

jaya-karnataka

ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕ ರಾಮದಾಸ್ ಶೆಟ್ಟಿ, ಜಿಲ್ಲಾಧ್ಯಕ್ಷ ಕಾರ್ತಿಕ್ ರೈ, ಲಯನ್ಸ್ ಜಿಲ್ಲೆ 317 ರ ಜಿಲ್ಲಾ ಸಂಪರ್ಕ ಅಧಿಕಾರಿ ಲ. ಸುದರ್ಶನ್ ಪಡಿಯಾರ್, ಸುದೀಪ್ ಕುಮಾರ್ ಶೆಟ್ಟಿ, ಪ್ರಭಾಕರ್ ಅಮೈ, ತೌಸೀಫ್  ವಿಟ್ಲ, ರಾಜೀವ್, ಪ್ರವೀಣ್ ನಾಯ್ಕ್,  ಅಶ್ವಿನಿ ಪೆರುವಾಯಿ, ಉಬೇದ್ ವಿಟ್ಲ, ಅಬುಬಕ್ಕರ್ ಅನಿಲ ಕಟ್ಟೆ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…

ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

ಉಜಿರೆ: ಬೆಳ್ತಂಗಡಿ ಬಳಿ ರೆಂಕೆದಗುತ್ತು ಎಂಬಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್…