tamanvi
ಕರಾವಳಿ

ಸಿರಿ ಸಂಸ್ಥೆಯ ವತಿಯಿಂದ ಧರ್ಮಸ್ಥಳದ ಎ.ವಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿಯ ರೆಂಕೆದಗುತ್ತುವಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೂಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನಲ್ಲಿ ಪ್ರತಿ ತಿಂಗಳು ಆಚರಿಸುವಂತೆ ಸಿರಿ ಸಿಬ್ಬಂದಿಗಳ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮ ಜೂನ್ 16ರಂದು ಜರುಗಿತು.

ಮುಖ್ಯ ಅತಿಥಿಯಾಗಿದ್ದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ಜೂನ್ ತಿಂಗಳಿನಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಸಿರಿ ಸಿಬ್ಬಂದಿಗಳಿಗೆ ಹಾಗೂ ಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ಸಿಬ್ಬಂದಿಗಳಿಗೆ ಶುಭ ಹಾರೈಸಿದರು. ಬಳಿಕ ಮಾತನಾಡಿದ ಅವರು, ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಅಮ್ಮನವರು ಮಹಿಳಾ ಸಬಲೀಕರಣದ ಧ್ಯೇಯೋದ್ದೇಶದಿಂದ ಪ್ರಾರಂಭಿಸಿರುವ ಸಿರಿ ಸಂಸ್ಥೆಯಲ್ಲಿ ಎಲ್ಲಾ ಸಿರಿ ಸಿಬ್ಬಂದಿಗಳು ಅತ್ಯಂತ ಶ್ರದ್ಧೆ, ಪ್ರಾಮಾಣಿಕತೆಯಿಂದ ದುಡಿಯುವ ಮೂಲಕ ಸಿರಿ ಬ್ರಾಂಡನ್ನು ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿಯುವ ಮೂಲಕ ಪೂಜ್ಯ ದಂಪತಿಗಳ ಕನಸನ್ನು ನನಸಾಗಿಸಬೇಕೆಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ಧನ ಮಾತನಾಡಿ, ಸಿರಿ ಸಂಸ್ಥೆಯ ಸಮಗ್ರ ಏಳಿಗೆಗಾಗಿ ಶ್ರಮ ವಹಿಸಿ, ಸಂಪೂರ್ಣ ಸಹಕಾರ ನೀಡುತ್ತಾ ಬಂದಿರುವ ಎ.ವಿ. ಶೆಟ್ಟಿ ದಂಪತಿಗಳಿಗೆ ಎಲ್ಲಾ ಸಿರಿ ಸಿಬ್ಬಂದಿಗಳ ಪರವಾಗಿ ಗೌರವಾರ್ಪಣೆ ಸಲ್ಲಿಸಿದರು.

ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದ ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ಧನ ಅವರು ಸಿರಿ ಸಿಬ್ಬಂದಿಗಳಿಗೆ ಶುಭಕೋರಿದರು.

ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಲೋಕಕಲ್ಯಾಣಾರ್ಥವಾಗಿ ನಡೆಸುತ್ತಿರುವ ವಿವಿಧ ಕಾರ್ಯಚಟುವಟಿಕೆಗಳ ವಿಡಿಯೋ ಪ್ರದರ್ಶಿಸಲಾಯಿತು.

ಸಿರಿ ಕ್ಲಬ್ ಅಧ್ಯಕ್ಷೆ ಉಷಾ, ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಸಿರಿ ಸಿಬ್ಬಂದಿಗಳು ಭಾಗವಹಿಸಿದ್ದರು. ಸಿರಿ ಸಂಸ್ಥೆಯ ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…