ಕರಾವಳಿ

ಪುರುಷರಕಟ್ಟೆ ಪ್ರಕರಣ: ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ, ಇದೀಗ ರಾಜಕೀಯ ಸಂಧಾನ ಸರಿಯಲ್ಲ | ವಿಶ್ವ ಹಿಂದೂ ಪರಿಷತ್ ಪ್ರಮುಖರು ಭೇಟಿ ನೀಡಿ, ಪೋಷಕರಿಗೆ ಸಾಂತ್ವನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಪ್ರಮುಖರು ಭೇಟಿ ನೀಡಿ, ಪೋಷಕರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.

maithri

ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ ಘಟನೆಯನ್ನು ಕೇವಲ ‘ತಪ್ಪು ಗ್ರಹಿಕೆ’ ಎಂದು ಬಿಂಬಿಸಿ, ಆರೋಪಿಗಳನ್ನು ರಕ್ಷಿಸಲು ನಡೆಯುತ್ತಿರುವ ರಾಜಕೀಯ ಸಂಧಾನದ ಪ್ರಯತ್ನವು ಸರಿಯಲ್ಲ.

ಈ ಘಟನೆಯ ಕುರಿತು ಪೊಲೀಸ್ ಇಲಾಖೆಯು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಯುವತಿಗೆ ಸೂಕ್ತ ನ್ಯಾಯ ಒದಗಿಸಿಕೊಡಬೇಕು. ಹಾಗೆಯೇ, ಸಂತ್ರಸ್ತ ಯುವತಿ ಮತ್ತು ಆಕೆಯ ಕುಟುಂಬದ ಮೇಲೆ ದಾಖಲಿಸಲಾಗಿರುವ ಸುಳ್ಳು ಪ್ರಕರಣವನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ವಿಶ್ವ ಹಿಂದೂ ಪರಿಷತ್ ಪ್ರಮುಖರು ಆಗ್ರಹಿಸಿದರು

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್, ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್, ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಅಧ್ಯಕ್ಷ ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಹಾಗೂ ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಟಾಲಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ | ದೇಹಕ್ಕೆ ಮಾತ್ರ ಸಾವು, ಆತ್ಮನಿಗೆ ಸಾವಿಲ್ಲ: ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ

ಸತ್ಯ, ಅಹಿಂಸೆ, ಬದುಕು ಮತ್ತು ಬದುಕಲು ಬಿಡು. ಪರಸ್ಪರೋಪಗ್ರಹೋಜೀವಾನಾಂ – ಇದು ಜೈನಧರ್ಮದ ಸಾರ.…