tamanvi
ಕರಾವಳಿ

ಶ್ರೀಕಾಂತ್ ಪೂಜಾರಿ ಬಿರಾವು ರವರಿಗೆ ರಾಷ್ಟ್ರೀಯ ಯೂತ್ ಐಕಾನ್ ಪ್ರಶಸ್ತಿ 2026

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಕಳೆದ ಹಲವಾರು ವರ್ಷಗಳಿಂದ ಯುವಜನರ ಸಬಲೀಕರಣದಲ್ಲಿ ತೊಡಗಿಸಿಕೊಂಡಿರುವ ಶ್ರೀಕಾಂತ್ ಪೂಜಾರಿ ಬಿರಾವು ರವರಿಗೆ 2026 ನೇ ಸಾಲಿನ ರಾಷ್ಟ್ರೀಯ ಯೂತ್ ಐಕಾನ್ ಪ್ರಶಸ್ತಿ ಗೆ ಆಯ್ಕೆ ಸಮಿತಿ ಆಯ್ಕೆ ಮಾಡಿದೆ.

ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಯುವ ಜನರಿಗೆ ವಿವಿಧ ಶಾಲಾ ಕಾಲೇಜು, ಯುವಕ ಯುವತಿ ಮಂಡಲ ,ಸ್ವ ಸಹಾಯ ಸಂಘದ ಮಹಿಳೆಯರಿಗೆ ಮಾದಕದ್ರವ್ಯ ವ್ಯಸನ ತಡೆಗಟ್ಟುವಿಕೆ, ಜೀವನ ಕೌಶಲ್ಯ, ವೃತ್ತಿ ಮಾರ್ಗದರ್ಶನ, ಉದ್ಯೋಗ ಸಿದ್ದತೆ, ಉದ್ಯಮಶೀಲತೆ ಇನ್ನಿತರ ಕೌಶಲ್ಯಗಳ ಕುರಿತಾದ ಉಚಿತ ತರಬೇತಿ ನೀಡಿದ ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 13 ಉದ್ಯೋಗ ಮೇಳ ಅಯೋಜಿಸಿ ಯುವಜನರ ಉದ್ಯೋಗಕ್ಕೆ ನೆರವಾಗಿದ್ದಾರೆ.ದೇಶದ ವಿವಿಧ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಉದ್ಯೋಗಿ ಗಳನ್ನು ಸರಕಾರಿ ಕಾಲೇಜಿನ‌ ಅಂತಿಮ ವರ್ಷದ ಸುಮಾರು 390  ವಿದ್ಯಾರ್ಥಿಗಳಿಗೆ ಮಾರ್ಗದರ್ಶಕ ರ ಮುಖಾಂತರ ಉದ್ಯೋಗ ಸಿದ್ದತೆ ಕುರಿತಾದ ಮಾರ್ಗದರ್ಶನ ನೀಡಿದ್ದಾರೆ.ಇವರು ಕೇಂದ್ರ ಮತ್ತು ರಾಜ್ಯ ಸರಕಾರದ ಹಲವಾರು ಯೋಜನೆ ಮತ್ತು ಕಾರ್ಯಗಳನ್ನು ಜಿಲ್ಲೆಯಲ್ಲಿ ಸಂಘಟಿಸಿದ್ದಾರೆ.

ಇವರು ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಯುವ ಸಮಾವೇಶ, ತರಬೇತಿ, ಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಇವರ ಯುವ ಜನರ ಸಬಲೀಕರಣಕ್ಕೆ ನೀಡಿದ ಸೇವೆಯನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಅನೀಶ್ ಪ್ರಕಟಣೆ ನೀಡಿದ್ದಾರೆ.ಶ್ರೀಕಾಂತ್ ಪೂಜಾರಿ ಬಿರಾವು ರವರ ಯುವಜನ ಸೇವೆಯನ್ನು ಗುರುತಿಸಿ ಕಳೆದ ವರ್ಷ ಭಾರತ ಸರಕಾರ ದೆಹಲಿಯ ಕೆಂಪುಕೋಟೆ ಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಯಾಗಿ ಅಹ್ವಾನಿಸಿ ಗೌರವಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…