tamanvi
ಕರಾವಳಿ

ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

ಈ ಸುದ್ದಿಯನ್ನು ಶೇರ್ ಮಾಡಿ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮೂಡಬಿದ್ರೆ ಉಪವಿಭಾಗದ ಅರಣ್ಯಇಲಾಖೆ ಹಾಗೂ ಶಾಲೆಯ ವನಸಿರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಅರಣ್ಯ ಇಲಾಖೆಯ ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಉದ್ಘಾಟಿಸಿದರು.

ಅರಣ್ಯ ಇಲಾಖೆ ವತಿಯಿಂದ ಶಾಲಾ ಆವರಣದಲ್ಲಿ ಹಣ್ಣುಗಳ ಉದ್ಯಾನ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ ಅವರು, ಶಾಲಾ ವಠಾರದಲ್ಲಿ ಗಿಡನೆಟ್ಟು ಉತ್ತಮ ರೀತಿಯಲ್ಲಿ ಬೆಳೆಸುವ ಪ್ರತಿ ವಿದ್ಯಾರ್ಥಿಗೆ ತಲಾ 200 ರೂ. ಬಹುಮಾನ, ಶಾಲಾ ಶಿಕ್ಷಕರೊಬ್ಬರ ಮಾಸಿಕ ವೇತನ 8 ಸಾವಿರ ರೂ. ಹಾಗೂ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳನ್ನು ತನ್ನ ವೈಯಕ್ತಿಕ ದೇಣಿಗೆಯಾಗಿ ನೀಡುವುದಾಗಿ ಅವರು ಪ್ರಕಟಿಸಿದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಅವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕವರ್ಮ ಜೈನ್, ಉಪಾಧ್ಯಕ್ಷರಾದ ಶ್ವೇತಾಜಗದೀಶ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…