tamanvi
ಕರಾವಳಿ

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು ನಿಲ್ದಾಣಕ್ಕೆ ತಡವಾಗಿ ಆಗಮಿಸುತ್ತಿದ್ದು, ನಿತ್ಯ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಆಗ್ರಹಿಸಲಾಗಿದೆ.

ಧನುಷ್ ಪುತ್ತೂರು ಎಂಬವರು ಈ ಬಗ್ಗೆ ಸಂದೇಶ ರವಾನಿಸಿದ್ದು, ತಾನು ದಿನನಿತ್ಯ ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದು, ಪ್ಯಾಸೆಂಜರ್ ರೈಲನ್ನೇ ಅವಲಂಭಿಸಿದ್ದೇನೆ. ಬೆಳಿಗ್ಗೆ 7.48 ಸುಬ್ರಹ್ಮಣ್ಯದಿಂದ ಪುತ್ತೂರಿಗೆ ರೈಲು ಆಗಮಿಸಬೇಕಾದ ಸಮಯ. ಆದರೆ ಇದೀಗ ರೈಲು 7.58, 8.00, 8.15 ಗಂಟೆಗೆ ಆಗಮಿಸಿರುವುದೂ ಇದೆ. ರೈಲಿನ ಅನಗತ್ಯ ವಿಳಂಬದಿಂದ ಕಚೇರಿ, ಕಾಲೇಜು ಸೇರಿದಂತೆ ತುರ್ತಾಗಿ ತೆರಳಬೇಕಾದವರಿಗೆ ತೊಂದರೆ ಆಗಿದೆ ಎಂದು ಗಮನ ಸೆಳೆದಿದ್ದಾರೆ.

ಈ ಬಗ್ಗೆ ಈಗಾಗಲೇ ಸಂಬಂಧಪಟ್ಟವರಿಗೆ ಮನವಿ ನೀಡಿದ್ದು, ಸಂಸದರೂ ವಿಶೇಷ ಗಮನ ಹರಿಸಿ ರೈಲ್ವೇ ಇಲಾಖೆಯೊಂದಿಗೆ ಮಾತನಾಡಿ ಸರಿಯಾದ ಸಮಯಕ್ಕೆ ರೈಲು ಆಗಮಿಸುವಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…