tamanvi
ಕರಾವಳಿ

ಆ.18ರಂದು ಮಂಗಳೂರಿನಲ್ಲಿ BMS ಬೃಹತ್ ಪ್ರತಿಭಟನೆ; ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘ (BMS) ವತಿಯಿಂದ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ BMS ವತಿಯಿಂದ ಆಗಸ್ಟ್ 18ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

maithri

ಕಾರ್ಮಿಕರಿಗೆ ನ್ಯಾಯಯುತ ವೇತನ, ಉದ್ಯೋಗ ಭದ್ರತೆ, ಸಾಮಾಜಿಕ ಭದ್ರತೆ, ಪಿಂಚಣಿ, ಆರೋಗ್ಯ ರಕ್ಷಣೆ ಹಾಗೂ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಬೇಕು ಎಂದು BMS ಆಗ್ರಹಿಸಿದೆ.

ಪ್ರಮುಖ ಬೇಡಿಕೆಗಳೇನು?

ESIC ವೇತನ ಮಿತಿಯನ್ನು ₹21 ಸಾವಿರದಿಂದ ₹42 ಸಾವಿರಕ್ಕೆ ಹಾಗೂ EPF ವೇತನ ಮಿತಿಯನ್ನು ₹15 ಸಾವಿರದಿಂದ ₹30 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಸಂಘ ಒತ್ತಾಯಿಸಿದೆ. EPS-95 ಯೋಜನೆಯಡಿ ಕನಿಷ್ಠ ಪಿಂಚಣಿಯನ್ನು ₹1,000ರಿಂದ ₹7,500ಕ್ಕೆ ಹೆಚ್ಚಿಸಿ, ಪಿಂಚಣಿದಾರರಿಗೆ ಡಿಎ ಮತ್ತು ಸಮಗ್ರ ಆರೋಗ್ಯ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.

ಬೋನಸ್ ಮಿತಿಯನ್ನು ಹೆಚ್ಚಿಸುವುದು ಹಾಗೂ ಗ್ರಾಚ್ಯುಟಿ ಗರಿಷ್ಠ ಮಿತಿಯನ್ನು ₹20 ಲಕ್ಷದಿಂದ ₹40 ಲಕ್ಷಕ್ಕೆ ಏರಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗಿದೆ.

ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಯೋಜನಾ ನೌಕರರ ಗೌರವಧನ ಹೆಚ್ಚಿಸಿ, ಅವರಿಗೆ ಸಾಮಾಜಿಕ ಹಾಗೂ ನಿವೃತ್ತಿ ಭದ್ರತೆ ಒದಗಿಸಬೇಕು. ಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕರಿಗೆ ಅನ್ವಯಿಸುವ ಕಾನೂನುಗಳ ವ್ಯಾಪ್ತಿಯಲ್ಲಿ ‘ಸಮಾನ ಕೆಲಸಕ್ಕೆ ಸಮಾನ ವೇತನ’ ಜಾರಿಗೊಳಿಸಬೇಕು ಎಂದು BMS ಆಗ್ರಹಿಸಿದೆ.

ಬ್ಯಾಂಕ್ ನೌಕರರಿಗೆ ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿಗೊಳಿಸುವುದು ಹಾಗೂ ರಾಷ್ಟ್ರೀಯ ಕನಿಷ್ಠ ಮಾಸಿಕ ವೇತನವನ್ನು ₹30 ಸಾವಿರಕ್ಕೆ ನಿಗದಿಪಡಿಸಬೇಕು ಎಂಬ ಬೇಡಿಕೆಯನ್ನೂ ಸಂಘ ಮುಂದಿಟ್ಟಿದೆ.

ದಕ್ಷಿಣ ಕನ್ನಡದ ಸ್ಥಳೀಯ ಸಮಸ್ಯೆಗಳಿಗೂ ಪರಿಹಾರಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಕಟ್ಟಡ ಕಾರ್ಮಿಕರಿಗೆ ಮರಳು ಮತ್ತು ಕೆಂಪುಕಲ್ಲಿನ ಸರಬರಾಜು ಖಚಿತಪಡಿಸಿ, ದರ ನಿಯಂತ್ರಿಸಬೇಕು ಎಂದು BMS ಒತ್ತಾಯಿಸಿದೆ.

ಆಟೋ, ಕ್ಯಾಬ್ ಮತ್ತು ಟ್ಯಾಕ್ಸಿ ಚಾಲಕರಿಗೆ ನ್ಯಾಯಯುತ ಪ್ರಯಾಣ ದರ, ವಿಮೆ, ಪಿಂಚಣಿ ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.

ರಬ್ಬರ್, ಕೃಷಿ, ತೋಟಗಾರಿಕೆ, ಬೀಡಿ, ಹೋಟೆಲ್‌, ಆಸ್ಪತ್ರೆ, ಭದ್ರತಾ, ಮೀನುಗಾರಿಕೆ, ಗೇರು, ಕ್ವಾರಿ-ಕ್ರಷರ್, ಮಾಧ್ಯಮ, ಗೋದಾಮು ಹಾಗೂ ಸಣ್ಣ ಕೈಗಾರಿಕಾ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನ್ಯಾಯಯುತ ವೇತನ, ಸುರಕ್ಷತೆ ಮತ್ತು ಸಾಮಾಜಿಕ ಭದ್ರತೆ ಕಲ್ಪಿಸಬೇಕು ಎಂದು ಸಂಘ ಆಗ್ರಹಿಸಿದೆ.

ಇದರೊಂದಿಗೆ MRPL, NMPT, KIOCL ಹಾಗೂ KSRTC ಸೇರಿದಂತೆ ಪ್ರಮುಖ ಸಂಸ್ಥೆಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ, ಸಮಯಕ್ಕೆ ಸರಿಯಾಗಿ ವೇತನ ಪಾವತಿ, PF-ESI ಸೌಲಭ್ಯ ಹಾಗೂ ಉದ್ಯೋಗ ಭದ್ರತೆ ನೀಡಬೇಕು ಎಂದು BMS ಒತ್ತಾಯಿಸಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ

ಆಗಸ್ಟ್ 18ರಂದು ನಡೆಯಲಿರುವ ಪ್ರತಿಭಟನೆಯಲ್ಲಿ BMSನ ಎಲ್ಲಾ ಅಂಗಸಂಸ್ಥೆಗಳ ಪದಾಧಿಕಾರಿಗಳು, ಯೂನಿಯನ್ ಪ್ರಮುಖರು ಹಾಗೂ ವಿವಿಧ ಕ್ಷೇತ್ರಗಳ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮನವಿ ಮಾಡಿದೆ.

ಪತ್ರಿಕಾಗೋಷ್ಠಿಯಲ್ಲಿ BMS ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು., ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಮನಿಹಳ್ಳ, ಹಿರಿಯ ಮುಖಂಡ ಬಿ.ಕೆ. ದೇವಪ್ಪ ಗೌಡ, ಪುತ್ತೂರು BMS ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಕೆ. ಮರೀಲ್, ಅಧ್ಯಕ್ಷ ಹೇಮಂತ್ ಎಸ್. ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…