tamanvi
ಕರಾವಳಿ

ಕಡಬ: ಮನೆಯೊಳಗಿದ್ದ ಫ್ರಿಡ್ಜ್ ಏಕಾಏಕಿ ಸ್ಫೋಟ; ಮನೆಗೆ ಭಾರೀ ಹಾನಿ

ಈ ಸುದ್ದಿಯನ್ನು ಶೇರ್ ಮಾಡಿ

ರಾಮಕುಂಜ/ಆತೂರು: ಮನೆಯಲ್ಲಿದ್ದ ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು ಮನೆಗೆ ಭಾರೀ ಪ್ರಮಾಣದಲ್ಲಿ ಹಾನಿಯಾದ ಘಟನೆ ರಾಮಕುಂಜ ಗ್ರಾಮದ ಆತೂರಿನಲ್ಲಿ ಆ.11ರ ಸಂಜೆ ನಡೆದಿದೆ.

ಮನೆಯಲ್ಲಿದ್ದ ಫ್ರಿಡ್ಜ್‌ನಲ್ಲಿ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಭಾರೀ ಶಬ್ದದೊಂದಿಗೆ ಸ್ಫೋಟಗೊಂಡಿದೆ ಎನ್ನಲಾಗಿದೆ.

ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು, ಮೇಲ್ಛಾವಣಿ ಹಾಗೂ ಪೀಠೋಪಕರಣಗಳಿಗೆ ತೀವ್ರ ಹಾನಿಯಾಗಿದೆ. ಸ್ಫೋಟದ ಬೆನ್ನಲ್ಲೇ ಬೆಂಕಿ ಮನೆಯೊಳಗೆ ವ್ಯಾಪಿಸಿದ್ದರಿಂದ ಇತರ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಮನೆಯಲ್ಲಿದ್ದ ಸಾಮಗ್ರಿಗಳು ಸುಟ್ಟುಹೋಗಿವೆ.

ಸಮಯಪ್ರಜ್ಞೆಯಿಂದ ಪಾರಾದ ಗೃಹಿಣಿ

ಘಟನೆ ಸಂಭವಿಸಿದ ವೇಳೆ ಮನೆಯಲ್ಲಿ ಸಿದ್ದೀಕ್ ಅವರ ಪತ್ನಿ ಆರೀಫಾ ಅವರು ಮಾತ್ರ ಇದ್ದರು. ಫ್ರಿಡ್ಜ್‌ನಿಂದ ಹೊಗೆ ಹಾಗೂ ಬೆಂಕಿ ಬರುತ್ತಿರುವುದನ್ನು ಗಮನಿಸಿದ ಅವರು ತಕ್ಷಣವೇ ಮನೆಯಿಂದ ಹೊರಗೆ ಬಂದಿದ್ದಾರೆ. ಇದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಫೋಟದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ನೆರವಾಗಿದ್ದಾರೆ. ಘಟನೆಯಿಂದ ಮನೆಗೆ ಅಪಾರ ಪ್ರಮಾಣದ ಹಾನಿಯಾಗಿದ್ದು, ಸ್ಫೋಟಕ್ಕೆ ನಿಖರ ಕಾರಣ ಏನು ಎಂಬುದು ಪರಿಶೀಲನೆಯ ಬಳಿಕ ತಿಳಿದುಬರಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…