tamanvi
ಕರಾವಳಿಶಿಕ್ಷಣ

ಮಳೆ ರಜೆಯ ಕೊರತೆ ಸರಿದೂಗಿಸಲು ಸೆಪ್ಟೆಂಬರ್ 2ನೇ ಶನಿವಾರದಿಂದ ಪೂರ್ಣ ತರಗತಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಘೋಷಿಸಿದ್ದ ಶಾಲಾ ರಜೆಯಿಂದ ಉಂಟಾದ ಬೋಧನಾ ದಿನಗಳ ಕೊರತೆಯನ್ನು ಸರಿದೂಗಿಸಲು ಸೆಪ್ಟೆಂಬರ್ 2ನೇ ಶನಿವಾರದಿಂದ ಪೂರ್ಣ ತರಗತಿ ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಸೂಚನೆ ನೀಡಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಬಂಟ್ವಾಳ ಹಾಗೂ ಮೂಡುಬಿದಿರೆ ಶೈಕ್ಷಣಿಕ ವಲಯಗಳಿಗೆ ಒಟ್ಟು 8 ಪೂರ್ಣ ದಿನ ಹಾಗೂ 1 ಅರ್ಧ ದಿನ ರಜೆ ಘೋಷಿಸಲಾಗಿತ್ತು. ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಶೈಕ್ಷಣಿಕ ವಲಯಗಳಿಗೆ ಒಟ್ಟು 9 ಪೂರ್ಣ ದಿನ ರಜೆ ನೀಡಲಾಗಿತ್ತು.

ಈ ರಜೆಯಿಂದ ಉಂಟಾದ ಬೋಧನಾ ಅವಧಿಯ ಕೊರತೆಯನ್ನು ಸರಿದೂಗಿಸಲು ಸೆಪ್ಟೆಂಬರ್ 2ನೇ ಶನಿವಾರದಂದು ಮಧ್ಯಾಹ್ನದ ಬಳಿಕ ಪೂರ್ಣ ತರಗತಿ ನಡೆಸಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಇತರ ದಿನಗಳಲ್ಲಿ ಅಗತ್ಯವಿದ್ದಲ್ಲಿ ಸಂಜೆ ವೇಳೆಯಲ್ಲಿ ಹೆಚ್ಚುವರಿ ಒಂದು ಬೋಧನಾ ಅವಧಿ ನಡೆಸುವಂತೆಯೂ ಸೂಚಿಸಲಾಗಿದೆ.

ಪ್ರತಿ ಶಾಲೆಯು ಮಳೆಯ ರಜೆಯ ಲೆಕ್ಕಾಚಾರವನ್ನು ಆಧರಿಸಿ ಹೊಂದಾಣಿಕೆ ಮಾಡಿಕೊಳ್ಳಬೇಕಾದ ಬೋಧನಾ ಅವಧಿಯನ್ನು ನಿರ್ಧರಿಸಬೇಕು. ಈ ಕುರಿತು ಮುಖ್ಯಶಿಕ್ಷಕರು, ಸಹ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರೊಂದಿಗೆ ಚರ್ಚಿಸಿ ಅಗತ್ಯ ದಿನಗಳನ್ನು ನಿಗದಿಪಡಿಸಿ, ವೇಳಾಪಟ್ಟಿಯಲ್ಲಿ ದಾಖಲಿಸುವಂತೆ ಸೂಚಿಸಲಾಗಿದೆ.

ಶೈಕ್ಷಣಿಕ ಮಾರ್ಗಸೂಚಿಯನ್ವಯ ಅಗತ್ಯ ಬೋಧನಾ ದಿನಗಳನ್ನು ಪೂರ್ಣಗೊಳಿಸುವ ಮೂಲಕ ಮಳೆ ರಜೆಯಿಂದ ಉಂಟಾದ ಕೊರತೆಯನ್ನು ಸರಿದೂಗಿಸಲು ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…