tamanvi
ಕರಾವಳಿ

ದರ್ಬೆ ಘಟನೆಯ ಆರೋಪಿಗಳ ಶೀಘ್ರ ಬಂಧನಕ್ಕೆ ವಿ.ಎಚ್.ಪಿ. ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಆಗ್ರಹ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದರ್ಬೆಯಲ್ಲಿ ಅಂಗಡಿ ಮಾಲಕ, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ, ಶಾಂತಿ ಭಂಗ ಉಂಟು ಮಾಡಿದ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿರುವ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಅಂಗಡಿಯೊಳಗೆ ನುಗ್ಗಿ ಹಲ್ಲೆ ನಡೆಸಿರುವ ಘಟನೆಯನ್ನು ನೈತಿಕ ಪೊಲೀಸ್ ಗಿರಿ ಎಂದು ಟೀಕಿಸಿದ್ದಾರೆ.

ಅಂಗಡಿಯ ವ್ಯವಹಾರ ಸ್ಥಳದಲ್ಲಿ ಪ್ರಮಾದ ನಡೆದಿದೆ ಎಂದಾದರೆ ಅದರ ಬಗ್ಗೆ ಪೊಲೀಸ್ ದೂರು, ಗ್ರಾಹಕ ನ್ಯಾಯಾಲಯಕ್ಕೆ ದೂರು ನೀಡಬಹುದಿತ್ತು. ಆದರೆ ಇದೆಲ್ಲವನ್ನು ಬಿಟ್ಟು ಅಂಗಡಿ ಮಾಲಕ, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುವುದು ಖಂಡನೀಯ ಎಂದಿದ್ದಾರೆ.

ಇದಲ್ಲದೇ, ಗಲಾಟೆ ನಡೆದ ಬಳಿಕ ಅಂಗಡಿಯವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಪೊಲೀಸ್ ಸುಪರ್ಧಿಗೆ ತೆಗೆದುಕೊಂಡ ಬಳಿಕವೂ ಒಂದಷ್ಟು ಮಂದಿ ಹಲ್ಲೆ ನಡೆಸುವುದು ಪೊಲೀಸ್ ಕರ್ತವ್ಯ ಲೋಪವನ್ನು ಎತ್ತಿ ತೋರಿಸುತ್ತದೆ. ಮಾತ್ರವಲ್ಲ, ಹಲ್ಲೆ ನಡೆಸಿರುವುದು ದುರಹಂಕಾರದ ವರ್ತನೆ. ಅಂತಹವರನ್ನು ಇನ್ನೂ ಬಂಧಿಸಿಲ್ಲ. ಈಗ ಹುಡುಕುತ್ತಿದ್ದೇವೆ ಎಂದು ಹೇಳುವುದರ ಬದಲು, ಆಗಲೇ ಅರೆಸ್ಟ್ ಮಾಡಬಹುದಿತ್ತು. ಇದು ಕೂಡ ಪೊಲೀಸರ ಲೋಪ ಎಂದಿದ್ದಾರೆ.

ಅಂಗಡಿಯೊಳಗೆ ನುಗ್ಗಿ ಗಲಾಟೆ ಮಾಡಿದ ವ್ಯಕ್ತಿಗಳನ್ನು, ಹಲ್ಲೆ ಮಾಡಿದವರನ್ನು ತಕ್ಷಣವೇ ಬಂಧಿಸಬೇಕು. ಎರಡು ದಿನದ ಒಳಗಡೆ ಬಂಧನ ಆಗದೇ ಇದ್ದರೆ, ಹಿಂದೂ ಸಂಘಟನೆ ಹಾಗೂ ಸಾರ್ವಜನಿಕರು ಹೋರಾಟದ ಹಾದಿ ಹಿಡಿಯುವುದು ಅನುವಾರ್ಯ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…