ಕರಾವಳಿ

ಮಂಗಳೂರು ಮೀನುಗಾರಿಕಾ ಬಂದರಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ; ಕಾಮಗಾರಿ ಪರಿಶೀಲನೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ, ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಬಂದರಿನಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮುಖ್ಯಮಂತ್ರಿ ಮಾಹಿತಿ ಪಡೆದುಕೊಂಡರು. ಕಾಮಗಾರಿಗಳ ಪ್ರಗತಿ ಹಾಗೂ ಸಂಬಂಧಿಸಿದ ವಿಷಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಬಳಿಕ ಮುಖ್ಯಮಂತ್ರಿ ಮೀನುಗಾರರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆಗಳು, ಅಗತ್ಯತೆಗಳು ಹಾಗೂ ಜೀವನೋಪಾಯದ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದುಕೊಂಡರು. ಮೀನುಗಾರರ ಸಮಸ್ಯೆಗಳಿಗೆ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಈ ವೇಳೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿವಿಧ ಮುಖಂಡರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸುಳ್ಯದ ಇಬ್ಬರ ಸಾವು ಪ್ರಕರಣ: ಅನಧಿಕೃತವಾಗಿ ವಿದ್ಯುತ್ ಅಳವಡಿಸಿದ್ದ ತೋಟದ ಮಾಲಕರ ವಿರುದ್ಧ ಪ್ರಕರಣ ದಾಖಲು!!

ಸುಳ್ಯ: ವಿದ್ಯುತ್ ಪ್ರವಹಿಸಿ ಇಬ್ಬರ ಸಾವಿಗೆ ಕಾರಣವಾಗಿದ್ದ ತೋಟದ ಮಾಲಕರ ವಿರುದ್ಧ ಬೆಳ್ಳಾರೆ…