tamanvi
ಕರಾವಳಿ

ಉಳ್ಳಾಲ ಬೀಚ್‌ನಲ್ಲಿ ಸೇವಾದಳದಿಂದ ಸ್ವಚ್ಛತಾ ಕಾರ್ಯಕ್ರಮ

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಹಾಗೂ ಯಂಗ್ ಬ್ರಿಗೇಡ್ ಸೇವಾದಳದ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬೀಚ್‌ನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ರಾಷ್ಟ್ರೀಯ ಸೇವಾದಳದ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ ಹಾಗೂ ಯಂಗ್ ಬ್ರಿಗೇಡ್ ಸೇವಾದಳದ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ. ಅವರ ಮುಂದಾಳತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಬೀಚ್ ಪ್ರದೇಶದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಸಾರ್ವಜನಿಕರಲ್ಲಿ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ರಮೇಶ್ ಶೆಟ್ಟಿ ಬೋಳಿಯಾರ್, ವಿಶ್ವನಾಥ್ ಬಜಾಲ್, ಜೋಕಿಂ ಡಿ. ಸೋಜಾ, ಯು.ಟಿ. ಫರೀದ್ ಇಫ್ತಿಕಾರ್, ಜುಬೈರ್ ತಲಮೊಗೆರು, ಸಮೀರ್ ಪಜೀರ್, ಶೀಲಾ ಭದ್ರಾವತಿ, ಅನಿತಾ, ಶಶಿಕಲಾ, ಡೋಲ್ಸಿ, ಅರ್ಚನಾ, ರಝಾಕ್ ಕುಕ್ಕಾಜೆ, ತಂಝೀಲ್, ಧರ್ಮಣ್ಣ ಶೆಟ್ಟಿ ಗಾರ್, ಇಲ್ಯಾಸ್, ಅನ್ಸಾರ್ ಕೀನ್ಯ, ದಾವೂದ್ ಶೇಖ್, ಉಮ್ಮರ್ ಸಾಲೆತ್ತೂರು ಸೇರಿದಂತೆ ಹಲವರು ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು, ಪುತ್ತೂರು, ಸುಳ್ಯದಲ್ಲಿ ಕೋರ್‌ ಮೆಗಾ ಸೇಲ್‌.. ರಿಫರ್ಬಿಶ್ಡ್ ಲ್ಯಾಪ್’ಟಾಪ್ ಖರೀದಿಗೆ ಸಿಗಲಿದೆ ಭರ್ಜರಿ ಆಫರ್ಸ್!!

ಮಂಗಳೂರು: ಪುತ್ತೂರು, ಸುಳ್ಯ ಹಾಗೂ ಮಂಗಳೂರಿನಲ್ಲಿ ಶಾಖೆಗಳನ್ನು ಹೊಂದಿರುವ ಕೋರ್ ಟೆಕ್ನಾಲಜೀಸ್…

ವ್ಯಾಜ್ಯ ಮುಕ್ತ ಗ್ರಾಮ ನಿರ್ಮಾಣಕ್ಕೆ ಲೋಕ ಅದಾಲತ್: ಕಾನೂನು ಸಾಕ್ಷರತೆ, ಉಚಿತ ಕಾನೂನು ನೆರವಿನ ಅಭಿಯಾನ

ಪುತ್ತೂರು: ವ್ಯಾಜ್ಯ ಮುಕ್ತ ಗ್ರಾಮ ನಿರ್ಮಾಣದ ಉದ್ದೇಶದಿಂದ ಕಾನೂನು ಸಾಕ್ಷರತೆ, ಉಚಿತ ಕಾನೂನು…