ಪುತ್ತೂರು: ಪರಿಸರ ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ 2021ರಲ್ಲಿ ಪುತ್ತೂರಿನಲ್ಲಿ ಆರಂಭಗೊಂಡಿರುವ ಗ್ರೀನ್ ಇಂಪಾಕ್ಟ್ ಫೌಂಡೇಶನ್ನ ‘ಮಣ್ಣು ನಮ್ಮ ಆತ್ಮ’ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾಗಿ ರೊ. ಅಶೋಕ್ ನಾಯ್ಕ್ ವಳಂಕುಮೇರಿ ನೇಮಕಗೊಂಡಿದ್ದಾರೆ.
ಮಣ್ಣಿನ ಫಲವತ್ತತೆ ಹಾಗೂ ಮಣ್ಣಿನ ಆರೋಗ್ಯದ ಕುರಿತು ಸಮಗ್ರ ಜಾಗೃತಿ ಮೂಡಿಸುವ ಉದ್ದೇಶ ಹೊಂದಿರುವ ‘ಮಣ್ಣು ನಮ್ಮ ಆತ್ಮ’ ಯೋಜನೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿವಿಧ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ಮಣ್ಣಿನ ಆರೋಗ್ಯದ ಸಂರಕ್ಷಣೆ, ಮಣ್ಣಿನ ಸವಕಳಿ ತಡೆಗಟ್ಟುವಿಕೆ ಹಾಗೂ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ರೊ. ಅಶೋಕ್ ನಾಯ್ಕ್ ಅವರು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ನ ಸಕ್ರಿಯ ಸದಸ್ಯರಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಮರಾಟಿ ಸಂರಕ್ಷಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ಜಿಲ್ಲೆಯಾದ್ಯಂತ ಮಣ್ಣಿನ ಸಂರಕ್ಷಣೆ ಹಾಗೂ ಫಲವತ್ತತೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ‘ಮಣ್ಣು ನಮ್ಮ ಆತ್ಮ’ ಯೋಜನೆಯ ಮೂಲಕ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುವುದು.

























