ಕರಾವಳಿ

ಅ. 16ರಿಂದ ಕರಾವಳಿಯಲ್ಲಿ ಮಳೆ ಸಾಧ್ಯತೆ!

ಈ ಸುದ್ದಿಯನ್ನು ಶೇರ್ ಮಾಡಿ

ಕರಾವಳಿ ಕರ್ನಾಟಕದಲ್ಲಿ ಅ. 16ರಿಂದ ಮಳೆಯಾಗುವ ಸಾಧ್ಯತೆ ಇರುವುದಾಗಿ ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಯನ್ನೊಳಗೊಂಡ ಕರಾವಳಿ ಕರ್ನಾಟಕದಲ್ಲಿ ಅ. 16ರಿಂದ 20ರವರೆಗೆ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ.

ಬೆಂಗಳೂರು ನಗರ, ಗ್ರಾಮಾಂತರ, ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ,ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಅ. 15ರಿಂದ 20ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೆ ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿಯೂ ಅ. 16ರಿಂದ 20ರವರೆಗೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆಯ ಪ್ರಕಟನೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ವಳಾಲು ಟೋಲ್ ಸಂಗ್ರಹಕ್ಕೆ ತೀವ್ರ ವಿರೋಧ: ಗೇಟ್‌ ತೆರೆದು ವಾಹನಗಳ ಮುಕ್ತ ಸಂಚಾರಕ್ಕೆ ಅವಕಾಶ ನೀಡಿದ ಪ್ರತಿಭಟನಾಕಾರರು!!

ಉಪ್ಪಿನಂಗಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ವಳಾಲು ಪಡ್ಪು ಸಮೀಪದ ಟೋಲ್…