ಕರಾವಳಿ

ಸವಾಲಿನ ನಡುವೆ ಮಂಗಳೂರು–ಬೆಂಗಳೂರು ರೈಲು ಮಾರ್ಗ ವಿದ್ಯುದೀಕರಣ ಪೂರ್ಣ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ | ಮಂಗಳೂರು – ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲಿಗೆ ಹಸಿರು ನಿಶಾನೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು–ಬೆಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಬಹುಕಾಲದ ಕನಸಾಗಿತ್ತು. ಕಾಮಗಾರಿ ಅನುಷ್ಠಾನದ ವೇಳೆ ಹಲವು ಸವಾಲುಗಳು ಎದುರಾದರೂ ಎಲ್ಲ ಅಡೆತಡೆಗಳನ್ನು ಯಶಸ್ವಿಯಾಗಿ ನಿವಾರಿಸಿ ಇಂದು ವಿದ್ಯುದೀಕೃತ ರೈಲು ಸಂಚಾರ ಆರಂಭಿಸಿರುವುದು ಸಂತಸದ ವಿಚಾರ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.

ವಿದ್ಯುದೀಕರಣಗೊಂಡ ರೈಲಿನಲ್ಲಿ ತಾವು ಬೆಂಗಳೂರಿಗೆ ಪ್ರಯಾಣಿಸಲಿರುವುದಾಗಿ ತಿಳಿಸಿದ ಅವರು, ಈ ಯೋಜನೆ ಸಾಕಾರಗೊಳ್ಳಲು ಶ್ರಮಿಸಿದ ರೈಲ್ವೆ ಅಧಿಕಾರಿಗಳನ್ನು ಅಭಿನಂದಿಸಿದರು.

ಬೆಂಗಳೂರು ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಗೆ ಸೇರ್ಪಡೆಯಾಗುವಲ್ಲಿ ನಿರಂತರ ಪ್ರಯತ್ನ ನಡೆಸಿದ ರೈಲ್ವೆ ಅಧಿಕಾರಿ ರಾಜೇಶ್ ಚಂದ್ರ ಅವರ ಕಾರ್ಯವನ್ನು ವಿಶೇಷವಾಗಿ ಶ್ಲಾಘಿಸಿದ ಸಚಿವರು, ಅವರ ಕೊಡುಗೆಗಾಗಿ ಧನ್ಯವಾದ ಸಲ್ಲಿಸಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಜನಪರ ಕಾಳಜಿ ಮತ್ತು ರೈಲ್ವೆ ಅಭಿವೃದ್ಧಿಗಾಗಿ ನಡೆಸುತ್ತಿರುವ ನಿರಂತರ ಪ್ರಯತ್ನಗಳನ್ನೂ ಪ್ರಶಂಸಿಸಿದರು. ಗುಂಡ್ಮಿ ರೈಲು ನಿಲ್ದಾಣದ ಬೇಡಿಕೆ ಈಡೇರುವವರೆಗೂ ಅವರು ಸಮಾಧಾನಗೊಂಡಿರಲಿಲ್ಲ. ನಿಲ್ದಾಣದ ಬೇಡಿಕೆ ಈಡೇರಿದ ಬಳಿಕವಷ್ಟೇ ಸಂತಸ ವ್ಯಕ್ತಪಡಿಸಿದ್ದರು ಎಂದು ಸಚಿವರು ಅವರ ಬದ್ಧತೆಯನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಾಕಿ ಇರುವ ರೈಲ್ವೆ ಮೇಲ್ಸೇತುವೆ (ROB), ಕೆಳಸೇತುವೆ (RUB) ನಿರ್ಮಾಣ ಹಾಗೂ ಲೆವೆಲ್ ಕ್ರಾಸಿಂಗ್ ಸಮಸ್ಯೆಗಳಿಗೆ ಮುಂದಿನ ದಿನಗಳಲ್ಲಿ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳನ್ನು ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಗಾಗಿ 94 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಅವರು ತಿಳಿಸಿದರು.

ರೈಲ್ವೆ ಸಂಪರ್ಕ, ಮೂಲಸೌಕರ್ಯ ಮತ್ತು ಪ್ರಯಾಣಿಕರ ಸೌಲಭ್ಯಗಳ ಅಭಿವೃದ್ಧಿಗೆ ಕೇಂದ್ರ ಸರಕಾರ ಆದ್ಯತೆ ನೀಡುತ್ತಿದ್ದು, ಕರಾವಳಿ ಭಾಗದ ರೈಲ್ವೆ ವ್ಯವಸ್ಥೆಯನ್ನು ಮತ್ತಷ್ಟು ಉನ್ನತೀಕರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…