ಕರಾವಳಿ

ತುಳು ಅಧಿಕೃತ ಭಾಷೆ ಆದೇಶ ಹೊರಡಿಸಿದ ರಾಜ್ಯ ಸರಕಾರಕ್ಕೆ ತುಳು ಅಕಾಡಮಿ ಅಭಿನಂದನೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು ಭಾಷೆಯನ್ನು ಜಾರಿಗೊಳಿಸಿದ ಸಚಿವ ಸಂಪುಟ ಸಭೆಯ ನಿರ್ಣಯವನ್ನು ಅಧಿಕೃತವಾಗಿ ಸರಕಾರಿ ಆದೇಶವಾಗಿ ಹೊರಡಿಸಿರುವುದನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಸ್ವಾಗತಿಸಿದೆ.

ಸೆ.18ರಂದು ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಹೆಚ್ಚುವರಿ ಆಡಳಿತ ಭಾಷೆ ಯಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದರು. ಸಂಪುಟ ಸಭೆಯ ನಿರ್ಣಯದ ಈ ಘೋಷಣೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮಹತ್ವದ ಸರಕಾರಿ ಆದೇಶವನ್ನು ರಾಜ್ಯಪಾಲರ ಪರವಾಗಿ ನ.25ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಪ್ರಕಟಿಸಿರುತ್ತಾರೆ.

ಜಿಲ್ಲಾಡಳಿತದಲ್ಲಿ ತುಳು ಭಾಷೆಯನ್ನು ಅನುಷ್ಠಾನಗೊಳಿಸುವ ವಿಧಿ ವಿಧಾನಗಳ ಬಗ್ಗೆ ಈ ಆದೇಶವು ನಿರ್ದೇಶನ ಗಳನ್ನು ನೀಡಿರುತ್ತದೆ. ತುಳುವರ ಬಹುಕಾಲದ ಬೇಡಿಕೆಯನ್ನು ಅನುಷ್ಠಾನಕ್ಕೆ ತರಲು ಕಾರಣಕರ್ತರಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರನ್ನು, ಶಾಸಕರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿನಂದಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts