Gl harusha
ಕರಾವಳಿ

ಹಾಸನ: ಕಾನ್ಸ್‌ಟೇಬಲ್‌ ಬರ್ಬರ ಹತ್ಯೆ!!

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ: ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ

srk ladders
Pashupathi
Muliya

ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್‌ ಕಾನ್ಸ್‌ಟೇಬಲ್‌ನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದವರಾದ ಹರೀಶ್.ವಿ (32) ಕೊಲೆಯಾದ ಪೊಲೀಸ್‌ ಕಾನ್ಸ್‌ಟೇಬಲ್.

ಹರೀಶ್ ಬೆಂಗಳೂರಿನ KSISFನಲ್ಲಿ ಕಾನ್ಸ್‌ಟೇಬಲ್ ಆಗಿದ್ದರು. ಇದೇ ತಿಂಗಳು 11 ರಂದು ಹರೀಶ್ ವಿವಾಹ ನಿಶ್ಚಯವಾಗಿತ್ತು.

ಸೋಮವಾರ ರಾತ್ರಿ ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್‌ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ

ಈ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಹರೀಶ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಈ ಸಂಬಂಧ ದುದ್ದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹಾಸನ ಎಸ್ಪಿ ಮುಹಮ್ಮದ್ ಸುಜೇತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಚಿಣ್ಣರ ಪಾರ್ಕ್’ನಲ್ಲಿ ಚಂದ್ರಮಂಡಲ ಚರಿತೆ ಯಕ್ಷಗಾನ | ಕರಾವಳಿಯ ಗಂಡು ಕಲೆಗೆ ಹೆಜ್ಜೆ ಹಾಕಿದ ತುಮಕೂರಿನ ಕಲಾವಿದರು

ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ…

ಕಾಂತೇರಿ ಜುಮಾದಿಗೆ ‘ಕಾಂತಾರ’ದಂತ ಭೀತಿ!! ಇದು ದಂತಕಥೆಯಲ್ಲ; ನೈಜಕಥೆ-  ಸೆಝ್’ನಿಂದ ಹೊಸ ತಪರಾಕಿ!

ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ…