Gl harusha
ಕರಾವಳಿ

ಮಂಗಳೂರು: ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಗಡುವು!!

ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್‌ಗಳನ್ನು ಹೊರತುಪಡಿಸಿ ಎಕ್ಸ್‌ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಿ ಕಾರ್ಯಾಚರಣೆ ನಡೆಸುವಂತೆ ಮಂಗಳವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ವಿಧಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್‌ಗಳನ್ನು ಹೊರತುಪಡಿಸಿ ಎಕ್ಸ್‌ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಿ ಕಾರ್ಯಾಚರಣೆ ನಡೆಸುವಂತೆ ಮಂಗಳವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ವಿಧಿಸಲಾಗಿದೆ.

srk ladders
Pashupathi
Muliya

ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ದ.ಕ. ಜಿಲ್ಲಾಧಿಕಾರಿ ಮು ಮುಗಿಲನ್ ಎಂ.ಪಿ. ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈಗಾಗಲೇ ಸ್ವಯಂಚಾಲಿತ ಬಾಗಿಲನ್ನು ಹೊಂದಿರುವ ಬಸ್‌ಗಳು ಕಡ್ಡಾಯವಾಗಿ ಇಂದಿನಿಂದಲೇ ಈ ಆದೇಶವನ್ನು ಪಾಲಿಸಬೇಕು. ಬಾಗಿಲನ್ನು ತೆಗೆದು ಹಾಕಿರುವ ಮತ್ತು ಬಾಗಿಲು ಇಲ್ಲದ ಬಸ್‌ಗಳಿಗೆ ತಕ್ಷಣ ಬಾಗಿಲು ಅಳವಡಿಸಬೇಕು.

ಡಿ.10ರೊಳಗೆ ಕಡ್ಡಾಯವಾಗಿ ಈ ಆದೇಶವನ್ನು ಬಸ್‌ ಮಾಲಕರು ಅನುಷ್ಠಾನಗೊಳಿಸಬೇಕು. ತಪ್ಪಿದಲ್ಲಿ ಸಾರಿಗೆ ನಿಯಮದ ಉಲ್ಲಂಘನೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಲೈ ಮುಗಿಲನ್ ಎಚ್ಚರಿಸಿದರು. ಸಂಚಾರದ ವೇಳೆ ಎಲ್ಲ ಬಸ್‌ಗಳಲ್ಲೂ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಬಾಗಿಲು ಹಾಕಿಕೊಳ್ಳುವುದು ಕಡ್ಡಾಯವಾಗಿದೆ. ಇದರ ಬಗ್ಗೆ ಹಲವು ಬಾರಿ ಸೂಚನೆ ನೀಡಿದರೂ ಪಾಲನೆಯಾಗುತ್ತಿಲ್ಲ.

ಹೀಗಾಗಿ ತಕ್ಷಣದಿಂದಲೇ ಬಾಗಿಲು ಅಳವಡಿಸಲು ಎಲ್ಲ ಖಾಸಗಿ ಬಸ್‌ಗಳು ಕ್ರಮ ಕೈಗೊಳ್ಳಬೇಕು. ನಗರ ಸಾರಿಗೆ ಬಸ್‌ಗಳಿಗೆ ಬಾಗಿಲು ಅಳವಡಿಕೆ ಕುರಿತಂತೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಮಂಗಳೂರು- ಕಾರ್ಕಳ, ಬಜಪೆ-ತಲಪಾಡಿ ಸೇರಿ ದಂತೆ ಎಂಟು ಹೊಸ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದಿಂದ ವಿವಿಧ ಮಾರ್ಗಗಳಲ್ಲಿ ಈ ಹಿಂದೆ 56 ಸಿಂಗಲ್‌ ಟ್ರಿಪ್‌ಗಳಿಗೆ ಪರವಾನಿಗೆ ಕೇಳಿತ್ತು. ನ್ಯಾಯಾಲಯದ ತಡೆಯಾಜ್ಞೆಯ ಕಾರಣದಿಂದಾಗಿ ಪರವಾನಿಗೆ ಸಿಕ್ಕಿಲ್ಲ. ಇದೀಗ 8ಟ್ರಿಪ್‌ಗಳ ಬೇಡಿಕೆಯಲ್ಲಿ ಕೇವಲ 3ಟ್ರಿಪ್‌ಗೆ ಅವಕಾಶ ನೀಡಲಾಗಿದೆ. ಕೇಂದ್ರ ಸರಕಾರದ ಏರಿಯಾ ಂ ನಿಯಮದ ಪ್ರಕಾರ ಹಾಗೂ ಚಾಪ್ಟ‌ರ್-5ರಂತೆ ಹೊಸ ರೂಟ್ ಪರವಾನಿಗೆ ನೀಡಲು ಸಾರಿಗೆ ಪ್ರಾಧಿಕಾರಕ್ಕೆ ಅಧಿಕಾರ ಇದೆ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಚಿಣ್ಣರ ಪಾರ್ಕ್’ನಲ್ಲಿ ಚಂದ್ರಮಂಡಲ ಚರಿತೆ ಯಕ್ಷಗಾನ | ಕರಾವಳಿಯ ಗಂಡು ಕಲೆಗೆ ಹೆಜ್ಜೆ ಹಾಕಿದ ತುಮಕೂರಿನ ಕಲಾವಿದರು

ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ…

ಕರಾವಳಿ – ಮುಂಬೈ ಮತ್ಸ್ಯಗಂಧ ರೈಲಿಗೆ ಫೆ. 17ರಿಂದಲೇ ಹೊಸರೂಪ! ಅಪಘಾತವಾದರೂ ಪ್ರಯಾಣಿಕರು ಸುರಕ್ಷಿತ: ಹೀಗೊಂದು ವಿನೂತನ ತಂತ್ರಜ್ಞಾನ

ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ…