ಕರಾವಳಿ

ಚಡ್ಡಿ ಗ್ಯಾಂಗ್: ದ.ಕ. ಎಸ್ಪಿ ಖಡಕ್ ಸೂಚನೆ!!

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ದ.ಕ. ಎಸ್ಪಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ದ.ಕ. ಎಸ್ಪಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂದಿಸಿದಂತೆ ಚಡ್ಡಿ ಗ್ಯಾಂಗ್ ನಿಂದ ತಲಾವಾರು ತೋರಿಸಿ ಬೆದರಿಕೆ ಎಂಬ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು ಇದರ ಬಗ್ಗೆ ತನಿಖೆ ನಡೆಸಲಾಗಿ ಇದು 2 ವರ್ಷಗಳ ಹಿಂದೆ ಮಲಯಾಳಂನ ಮನೋರಮಾ ನ್ಯೂಸ್ ನಲ್ಲಿ ಪ್ರಸಾರಗೊಂಡ ಕೊಟ್ಟಾಯಂನಲ್ಲಿ ನಡೆದ ಒಂದು ಸ್ಟೋರಿಯಲ್ಲಿ ಬರುವ ಫೋಟೋಗಳಾಗಿದೆ. ಇದೊಂದು ಸಂಪೂರ್ಣ ಕಟ್ಟು ಕಥೆ ಆಗಿದೆ ಎಂದು ತಿಳಿಸಿದ್ದಾರೆ.

SRK Ladders

ಅಂತಹ ನೈಜ ಘಟನೆಗಳು ಸಂಭವಿಸಿದಲ್ಲಿ ತಕ್ಷಣ 112 ಗೆ ಕರೆ ಮಾಡಿ ದೂರು ನೀಡುವಂತೆ ಸಾರ್ವಜನಿಕರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್ ಅವರು ವಿನಂತಿಸಿದ್ದಾರೆ.

ಈ ರೀತಿಯ ಹಳೆಯ ವಿಡಿಯೋ ಅಥವಾ ಫೋಟೋಗಳನ್ನು ಅವುಗಳ ಪೂರ್ವಾಪರ ಪರಿಶೀಲಿಸದೇ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…