ಕರಾವಳಿ

ಕಾರು ಲಾರಿ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು!! ಮಕ್ಕಳಿಬ್ಬರು ಗಂಭೀರ: 

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಮುಗಿಸಿ ಹಿಂದಿರುಗುವಾಗ ನರಗುಂದ, ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು, ಅವರಿಬ್ಬರ ಮಕ್ಕಳಿಗೆ ತೀವ್ರ ಗಾಯಗಳಾಗಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಮುಗಿಸಿ ಹಿಂದಿರುಗುವಾಗ

akshaya college

ನರಗುಂದ, ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು, ಅವರಿಬ್ಬರ ಮಕ್ಕಳಿಗೆ ತೀವ್ರ ಗಾಯಗಳಾಗಿವೆ.

ಮೃತರನ್ನು ಬಾಗಲಕೋಟೆ ಮೂಲದ ಸಿದ್ದರಾಮ ಮತ್ತು ಹೇಮಾ ಎಂದು ಗುರುತಿಸಲಾಗಿದೆ. ಗಾಯಗೊಂಡ ಮಕ್ಕಳಾದ ಮಲ್ಲಿಕಾರ್ಜುನ ಮತ್ತು ಸಹನ ಅವರನ್ನು ತಕ್ಷಣ ನರಗುಂದ  ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು, ಕುಟುಂಬವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿ ಮರಳಿ ಬರುವಾಗ ದಾರಿ ಮಧ್ಯೆ ಈ ದುರಂತ ಸಂಭವಿಸಿದೆ. ಅಪಘಾತದ ಪ್ರಭಾವದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ

ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…

ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ

ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…