ಕಾರ್ಕಳ: ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು – ದಾನಸಾಲೆ ಕೂಡು ರಸ್ತೆಯಲ್ಲಿ ಓಮ್ಮಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಓಮ್ನಿ ಕಾರಿನ ಬಾಗಿಲು ತೆರೆಯಲಾಗದೇ ಅದರಲ್ಲಿ ಗಾಯಾಳು ಸಿಲುಕಿಕೊಂಡಿದ್ದರು. ಗಾಯಾಳು ಮೂಡುಬಿದಿರೆ ಒಂಟಿಕಟ್ಟೆಯ ಸಂದೇಶ್ (35) ಎಂದು ತಿಳಿದುಬಂದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುವನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.