tamanvi
ಕರಾವಳಿ

ಓಮ್ಮಿ ಮತ್ತು ಕಾರು ನಡುವೆ ಭೀಕರ ಅಪಘಾತ; ಗಾಯಾಳುವನ್ನು ರಕ್ಷಿಸಿದ ಅಗ್ನಿಶಾಮಕ ದಳ!

ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು - ದಾನಸಾಲೆ ಕೂಡು ರಸ್ತೆಯಲ್ಲಿ ಓಮ್ಮಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತ

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ: ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು – ದಾನಸಾಲೆ ಕೂಡು ರಸ್ತೆಯಲ್ಲಿ ಓಮ್ಮಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಓಮ್ನಿ ಕಾರಿನ ಬಾಗಿಲು ತೆರೆಯಲಾಗದೇ ಅದರಲ್ಲಿ ಗಾಯಾಳು ಸಿಲುಕಿಕೊಂಡಿದ್ದರು. ಗಾಯಾಳು ಮೂಡುಬಿದಿರೆ ಒಂಟಿಕಟ್ಟೆಯ ಸಂದೇಶ್ (35) ಎಂದು ತಿಳಿದುಬಂದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಆಗಮಿಸಿ ಗಾಯಾಳುವನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…