ಪುತ್ತೂರು: ಎಡನೀರು ಸ್ವಾಮಿಗಳ ಕಾರಿನ ಮೇಲೆ ಕೆಲ ವ್ಯಕ್ತಿಗಳು ಹಲ್ಲೆಗೆ ಮುಂದಾದ ಘಟನೆ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ನಿಯೋಗ ಎಡನೀರು ಮಠಕ್ಕೆ ಭೇಟಿ ನೀಡಿ, ಸ್ವಾಮೀಜಿ ಜತೆ ಚರ್ಚಿಸಿದರು.
ವಿಶ್ವ ಹಿಂದೂ ಪರಿಷದ್ ಪ್ರಾಂತ ಉಪಾಧ್ಯಕ್ಷ ಯು . ಪೂವಪ್ಪ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ನಗರ ಅಧ್ಯಕ್ಷ ದಾಮೋದರ ಪಾಟಾಳಿ ಮೊದಲಾದವರು ನಿಯೋಗದಲ್ಲಿದ್ದರು.
ಹಿಂದೂ ಸಮಾಜದ ಯತಿಗಳಿಗೆ ಯಾವುದೇ ತೊಂದರೆಯಾದಲ್ಲಿ ವಿಶ್ವ ಹಿಂದೂ ಪರಿಷತ್ತು ಖಂಡಿಸುತ್ತದೆ ಹಾಗೂ ಅವರ ಬೆಂಬಲಕ್ಕೆ ನಿಲ್ಲುತ್ತದೆ. ಇಂತಹ ಘಟನೆಯ ಮರುಕಳಿಸದಂತೆ ಕೇರಳ ಸರ್ಕಾರ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸಬೇಕು ಎಂದು ನಿಯೋಗ ಒತ್ತಾಯಿಸಿದೆ.