ಮಂಗಳೂರು : ನಗರದ ಲೇಡಿಹಿಲ್‌ನ ನಾರಾಯಣಗುರು ವೃತ್ತದ ಬಳಿಯ ಪೆಟ್ರೋಲ್ ಬಂಕ್ ಸಮೀಪವೇ ಚಲಿಸುತ್ತಿದ್ದ ಮಾರುತಿ 800 ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿತು. ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗನೇ ಉರಿಯುತ್ತಿರುವುದನ್ನು ನೋಡಿ ಕಾರಿನಲ್ಲಿದ್ದ ಮೂವರು ತಕ್ಷಣವೇ ಕೆಳಕ್ಕಿಳಿದು ಪಾರಾಗಿದ್ದಾರೆ.
ಕೂಡಲೇ ಪೆಟ್ರೋಲ್ ಪಂಪ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಕದ್ರಿ ಅಗ್ನಿಶಾಮಕ ಇಲಾಖೆಯವರು ಸ್ಥಳಕ್ಕೆ ಆಗಮಿಸಿದ್ದಾರೆ ಯಾವುದೆ ಅನಾಹುತ ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ