ಕರಾವಳಿ

ಪುತ್ತೂರು: ಫಿಲೋಮಿನಾ ಪ ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕರ್ನಾಟಕ ಅಂಡರ್ ವಾಟರ್ ಸ್ಪೋರ್ಟ್ಸ್ ಮತ್ತು ಫಿನ್ ಸ್ವಿಮ್ಮಿಂಗ್ ಅಸೋಸಿಯೇಷನ್ ಆಯೋಜನೆಯಲ್ಲಿ ನ3 ರಂದು ಪುತ್ತೂರು ಡಾ. ಶಿವರಾಮ ಕಾರಂತ ಬಾಲವನ ಈಜು ಕೊಳದಲ್ಲಿ ನಡೆದ ಎರಡನೇ ಕರ್ನಾಟಕ ರಾಜ್ಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ - 2024 ರಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು  ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರ್ನಾಟಕ ಅಂಡರ್ ವಾಟರ್ ಸ್ಪೋರ್ಟ್ಸ್ ಮತ್ತು ಫಿನ್ ಸ್ವಿಮ್ಮಿಂಗ್ ಅಸೋಸಿಯೇಷನ್ ಆಯೋಜನೆಯಲ್ಲಿ ನ3 ರಂದು ಪುತ್ತೂರು ಡಾ. ಶಿವರಾಮ ಕಾರಂತ ಬಾಲವನ ಈಜು ಕೊಳದಲ್ಲಿ ನಡೆದ ಎರಡನೇ ಕರ್ನಾಟಕ ರಾಜ್ಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ – 2024 ರಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು  ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

      ಪ್ರಥಮ ವಿಜ್ಞಾನ ವಿಭಾಗದ  ಅರ್ ಅಮನ್ ರಾಜ್  ಇವರು ಬೈ – ಫಿನ್ 100ಮೀ  ಮತ್ತು 50ಮೀ ಅಪ್ನಿಯ ದಲ್ಲಿ ಚಿನ್ನ ಹಾಗೂ ಬೈ – ಫಿನ್ 200ಮೀ ಮತ್ತು ಬೈ – ಫಿನ್ 50ಮೀ ನಲ್ಲಿ ಬೆಳ್ಳಿ ಪದಕ, ದಿಗಂತ್ ವಿ ಎಸ್ ಮೊನೋ – ಫಿನ್ 100ಮೀ, ಬೈ – ಫಿನ್ 200ಮೀ ನಲ್ಲಿ ಚಿನ್ನ ಮತ್ತು 50ಮೀ ಅಪ್ನಿಯ ದಲ್ಲಿ ಬೆಳ್ಳಿ ಪದಕ, ಅನ್ವಿತ್ ರೈ ಬರಿಕೆ  ಮೊನೋ – ಫಿನ್ 50ಮೀ,  ಬೈ – ಫಿನ್ 50ಮೀ ನಲ್ಲಿ ಚಿನ್ನ ಹಾಗೂ ಮೊನೋ – ಫಿನ್ 100ಮೀ,  ಬೈ – ಫಿನ್ 100ಮೀ ನಲ್ಲಿ ಬೆಳ್ಳಿ ಪದಕ ಮತ್ತು ಪ್ರಾಧಿ ಕ್ಲಾರೆ ಪಿಂಟೋ ಮೊನೋ – ಫಿನ್ 50ಮೀ,  ಬೈ – ಫಿನ್ 50ಮೀ  ಮತ್ತು ಬೈ – ಫಿನ್ 100ಮೀ ನಲ್ಲಿ ಬೆಳ್ಳಿ ಪದಕವನ್ನು ಪಡೆದುಕೊಂಡಿರುತ್ತಾರೆ.
       ಇವರುಗಳಿಗೆ ಪರ್ಲಡ್ಕದ ಬಾಲವನದ ಅಕ್ವೆಟಿಕ್ ಕ್ಲಬ್ ನ ಈಜು ತರಬೇತುದಾರರಾದ ಪಾರ್ಥ ವಾರಣಾಸಿ, ನಿರೂಪ ಜಿ ಆರ್, ದೀಕ್ಷಿತ್ ರಾವ್ ಮತ್ತು ರೋಹಿತ್ ಪ್ರಕಾಶ್ ರವರು ತರಬೇತಿ ನೀಡಿರುತ್ತಾರೆ.
      ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

SRK Ladders


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…