pashupathi
ಕರಾವಳಿ

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿ ಆತ್ಮಹತ್ಯೆ!!

tv clinic
ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

akshaya college

ಮೃತಪಟ್ಟ ಬಾಣಂತಿ ಕಾರ್ಕಳದ ರಂಜಿತಾ (28) ಎಂ ತಿಳಿದು ಬಂದಿದೆ.

ಅವರು ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹಲವು ಆರೋಗ್ಯ ಸಮಸ್ಯೆಯಿಂದಾಗಿ ಲೇಡಿಗೋಷನ್ ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಎನ್ ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು ಎಂದು ತಿಳಿದುಬಂದಿದೆ.

ಮಹಿಳೆ ಗುಣಮುಖರಾಗಿ ಸೋಮವಾರ ಡಿಸ್ಟಾರ್ಜ್ ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ ಮಹಿಳೆ ಏಕಾಏಕಿ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ ಎಂದು ತಿಳಿದು ಬಂದಿದೆ.

ತಕ್ಷಣ ಮಹಿಳೆಯನ್ನು ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯಾಧಿಕಾರಿಯವರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…