ಕರಾವಳಿ

ಕುಟುಂಬ ಸಹಿತ ಪ್ರಯಾಣಿಸುತ್ತಿದ್ದಾಗ ತಂಡದಿಂದ ದಾಳಿ: ಆರೋಪಿಗಳು ಪೊಲೀಸ್ ವಶ!

ಮಂಗಳೂರಿನಿಂದ ತೆರಳುತ್ತಿದ್ದ ಕುಟುಂಬದ ಮೇಲೆ ತಂಡವೊಂದು ದಾಳಿ ನಡೆಸಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರಿನಿಂದ ತೆರಳುತ್ತಿದ್ದ ಕುಟುಂಬದ ಮೇಲೆ ತಂಡವೊಂದು ದಾಳಿ ನಡೆಸಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಬಂಧಿತ ಆರೋಪಿಗಳಾದ ಸುರತ್ಕಲ್‌ನ ಇಡ್ಯ ಈಶ್ವರನಗರ ನಿವಾಸಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು (24), ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ನಾರ್ಲ ಪಡೀಲ್ ನ ಸಚಿನ್ (24), ಬಂಟ್ವಾಳ ತಾಲೂಕಿನ ಪಜೀರ್ ಪೋಸ್ಟ್ ಕಂಬ್ಲಪದವು ಪಡಲಕೋಡಿ ನಿವಾಸಿ ಕುಶಿತ್ (18) ಎಂಬಾತನನ್ನು ಬಂಧಿಸಲಾಗಿದೆ.

SRK Ladders

ಕೇರಳದ ಕಾಸರಗೋಡು ಜಿಲ್ಲೆಯ ಬಡಾಜೆ ಕಡಂಬಾರ್ ಶಾಲೆಯ ಬಳಿಯ ಫಾತಿಮಾ ಮಂಜಿಲ್ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಮೊಹಮ್ಮದ್ ಆಸಿಫ್ (33) ಮಂಗಳೂರಿನಿಂದ ಕೇರಳಕ್ಕೆ ಕುಟುಂಬ ಸಮೇತ ಮನೆಗೆ ತೆರಳುತ್ತಿದ್ದಾಗ ರಾತ್ರಿ 7:40 ರ ಸುಮಾರಿಗೆ ಘಟನೆ ನಡೆದಿತ್ತು. ಮೊಹಮ್ಮದ್ ಆಸಿಫ್ ಅವರನ್ನು ಕೊಲ್ಲುವ ಉದ್ದೇಶದಿಂದ ದಾಳಿಕೋರರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್ 9 ರಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 109(1), 189(2), 190, 191(2), 191(3), 324(3) 2 222-2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ನವೆಂಬರ್ 11 ರಂದು ಬೆಳಿಗ್ಗೆ ಬಂಧಿಸಲಾಯಿತು. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಐಪಿಎಸ್, ಉಪ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಸಿದ್ದಾರ್ಥ್ ಗೋಯೆಲ್ ಮತ್ತು ಉಪ ಪೊಲೀಸ್ ಆಯುಕ್ತ (ಅಪರಾಧ ಮತ್ತು ಸಂಚಾರ) ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಯುತ್ತಿದೆ. ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಕಮಿಷನ‌ರ್ ಧನ್ಯ ಎನ್ ನಾಯಕ್ ನೇತೃತ್ವದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಕೃಷ್ಣ ಹೆಚ್ ಎನ್ ಮತ್ತು ಇತರ ಸಿಬ್ಬಂದಿಗಳ ಬೆಂಬಲದೊಂದಿಗೆ ಕಾರ್ಯಾಚರಣೆ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…

1 of 2