tamanvi
ಕರಾವಳಿ

ಕಂಬಳಬೆಟ್ಟು: ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು!

ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ.

ಬೈಕ್‌ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ.

ವಿಟ್ಲ ಕಬಕ ರಸ್ತೆಯ ಕಂಬೆಟ್ಟುವಿನಲ್ಲಿ ಅರ್ಕೆಜಾಲು ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ನುಗ್ಗಿದ ಬೈಕ್ ಗೆ ನಿಯಂತ್ರಣ ಕಳೆದುಕೊಂಡ ಕಾರು ಡಿಕ್ಕಿಯಾಗಿದೆ. ಬೈಕ್ ಚರಂಡಿಗೆ ಬಿದ್ದಿದ್ದು. ಕಾರು ರಸ್ತೆಯ ಇನ್ನೊಂದು ಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ.

ಗಾಯಗೊಂಡ ಬೈಕ್ ಸವಾರನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಜಖಂ ಗೊಂಡಿದ್ದು ಚಾಲಕನನ್ನು ರಕ್ಷಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…