tamanvi
ಕರಾವಳಿ

ಕಾಲೇಜಲ್ಲಿ ಉಪನ್ಯಾಸಕಿ ಕುಸಿದು ಬಿದ್ದು ಸಾವು!

ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಬುಧ ವಾರ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಬುಧ ವಾರ ಮೃತಪಟ್ಟಿದ್ದಾರೆ.

ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಮೃತಪಟ್ಟವರು.

ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದುಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ನುರಿತ ವೈದ್ಯರ ತಂಡ ತಿಳಿಸಿದ್ದರು.

ಅನಾಫಿಲ್ಯಾಕ್ಟಿಕ್ ರಿಯಾಕ್ಷನ್ ಗ್ಲೋರಿಯಾ ಅವರಿಗೆ ಫುಡ್ ಅಲರ್ಜಿ(ಅನಾಫಿಲ್ಯಾಕ್ಟಿಕ್ ರಿಯಾಕ್ಷನ್) ಸಮಸ್ಯೆ ಇತ್ತು. ಇದರಿಂದಾಗಿ ಈ ಹಿಂದೆಯೂ ಸ್ವಲ್ಪ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆ ಉಂಟಾಗಿ ಬಳಿಕ ಚೇತರಿಸಿಕೊಂಡಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.ಗ್ಲೋರಿಯಾ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…