ಕರಾವಳಿ

ಡ್ರಗ್ಸ್ ಪಾರ್ಸೆಲ್ ಹೆಸರಲ್ಲಿ ಬೆದರಿಕೆ: ವ್ಯಕ್ತಿಯಿಂದ 20 ಲ.ರೂ. ವಂಚನೆ..!

ಪಾರ್ಸೆಲ್‌ನಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ ಮಲ್ಪೆಯ ವ್ಯಕ್ತಿಯೋರ್ವರಿಗೆ ಅಪರಿಚಿತನೋರ್ವ 20 ಲಕ್ಷ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಲ್ಪೆ: ಪಾರ್ಸೆಲ್‌ನಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ ಮಲ್ಪೆಯ ವ್ಯಕ್ತಿಯೋರ್ವರಿಗೆ ಅಪರಿಚಿತನೋರ್ವ 20 ಲಕ್ಷ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ, ತನ್ನನ್ನು ಫೆಡೆಕ್ಸ್ ಕೊರಿಯರ್ ಕಂಪೆನಿಯ ಆಕಾಶ್ ವರ್ಮ ಎಂದು ಪರಿಚಯ ಮಾಡಿಕೊಂಡಿದ್ದಾನೆ. ನೀವು ಕಳಿಸಿರುವ ಪಾರ್ಸೆಲ್‌ನಲ್ಲಿ 2 ಕೆಜಿ ಬಟ್ಟೆ, 4 ಎಕ್ಸ್‌ಪಯರ್ಡ್ ಪಾಸ್‌ಪೋರ್ಟ್, 4 ಡೆಬಿಟ್ ಕಾರ್ಡ್, 1 ಲ್ಯಾಪ್‌ಟಾಪ್, 420 ಗ್ರಾಂ ಎಂಡಿಎಂಎ ಡ್ರಗ್ಸ್ ಇದ್ದು, ಪಾರ್ಸೆಲ್ ಮುಂಬಯಿಯ ಎನ್‌ಸಿಬಿ ವಶದಲ್ಲಿದೆ. ನೀವು ಅರ್ಮನ್ ಅಲಿ ಅವರಿಗೆ ಪಾರ್ಸೆಲ್ ಕಳುಹಿಸಿರುವುದಾಗಿ ತಿಳಿಸಿದ ಆತ ಪೊಲೀಸ್ ಕ್ಲಿಯರೆನ್ಸ್ ಪಡೆಯಲು ಸ್ಕ್ರಿಪ್ ವೀಡಿಯೋಕಾಲ್‌ಗೆ ಬರುವಂತೆ ಹೇಳಿದ್ದಾನೆ. ಬಳಿಕ ಸ್ಕ್ರಿಪ್‌ನಲ್ಲಿ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಸ್ಟೇಟ್‌ಮೆಂಟ್ ಸಾಫ್ಟ್ ಕಾಪಿಯನ್ನು ಪಡೆದುಕೊಂಡು, ಎಲ್ಲ ದಾಖಲೆಗಳನ್ನು ಪರಿಶೀಲಿಸುವುದಾಗಿ ತಿಳಿಸಿ ವ್ಯಕ್ತಿಗೆ ಐಸಿಐಸಿಐ ಬ್ಯಾಂಕ್ ಖಾತೆಯ ಐ ಮೊಬೈಲ್ ಅಪ್ಲಿಕೇಶನ್ ಲಾಗಿನ್ ಆಗಲು ಸೂಚನೆ ನೀಡಿದ್ದಾನೆ.

SRK Ladders

ಪರ್ಸನಲ್ ಲೋನ್ ಸೆಕ್ಷನ್‌ನಲ್ಲಿ 20 ಲಕ್ಷ ರೂ. ವಂಚನೆಯ ಹಣ ಇದ್ದು, ಅದನ್ನು ದೂರುದಾರರ ಖಾತೆಗೆ ಜಮೆ ಮಾಡಿಕೊಳ್ಳುವಂತೆ ಸೂಚಿಸಿರುತ್ತಾನೆ. ಅದರಂತೆ ದೂರುದಾರರು 20 ಲಕ್ಷ ರೂ. ವರ್ಗಾಯಿಸಿದ್ದು, ಬಳಿಕ ಇದು ವಂಚನೆ ಎಂಬುದು ಅರಿವಿಗೆ ಬಂದಿದೆ ಎಂದು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…