Gl jewellers
ಕರಾವಳಿ

ಸಬ್ ರಿಜಿಸ್ಟ್ರಾರ್ ಕಚೇರಿಯ ತಾಂತ್ರಿಕ ದೋಷ, ಇ-ಖಾತೆ ಲೋಪ! ಕಂದಾಯ ಸಚಿವರನ್ನು ಭೇಟಿಯಾಗಿ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿದ ಶಾಸಕ ಅಶೋಕ್ ರೈ

ಸಬ್‌ರಿಜಿಸ್ಟ್ರರ್ ಕಚೇರಿಯಲ್ಲಿನ ತಾಂತ್ರಿಕ ದೋಷ ಮತ್ತು ಇ ಖಾತೆಯಲ್ಲಿನ ಲೋಪವನ್ನು ಸರಿಪಡಿಸುವಲ್ಲಿ ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಬ್‌ರಿಜಿಸ್ಟ್ರರ್ ಕಚೇರಿಯಲ್ಲಿನ ತಾಂತ್ರಿಕ ದೋಷ ಮತ್ತು ಇ ಖಾತೆಯಲ್ಲಿನ ಲೋಪವನ್ನು ಸರಿಪಡಿಸುವಲ್ಲಿ ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.

Pashupathi
Papemajalu garady
Karnapady garady

ಶುಕ್ರವಾರ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಶಾಸಕರು ರಿಜಿಸ್ಟ್ರರ್ ಕಚೇರಿಯಲ್ಲಿನ ತಾಂತ್ರಿಕ ದೋಷದಿಂದ ಜನ ಸಾಮಾನ್ಯರಿಗೆ ತೀವ್ರ ತೊಂದರೆಯಾಗುತ್ತಿದೆ, ಇ ಖಾತೆಯಲ್ಲಿನ ಲೋಪ ದೋಷಗಳಿಂದಾಗಿ ಗ್ರಾಮೀಣ ಭಾಗದ ಜನತೆ ಸಂಕಷ್ಟಪಡುವಂತಾಗಿದೆ. ಕಳೆದ ಕೆಲವು ತಿಂಗಳಿಂದ ಈ ಸಮಸ್ಯೆ ಉಂಟಾಗಿದ್ದು ಇನ್ನೂ ಪರಿಹಾರವಾಗಿಲ್ಲ. ಅಧಿಕಾರಿಗಳು ಶೀಘ್ರದಲ್ಲೇ ಪರಿಹಾರವಾಗಲಿದೆ ಎಂಬ ಭರವಸೆಯನ್ನು ನೀಡಿದ್ದಾರೆ ವಿನ ಇದುವರೆಗೂ ವ್ಯವಸ್ಥೆಯಲ್ಲಿ ಸುಧಾರಣೆಯಾಗಿಲ್ಲ.ಸಬ್‌ರಿಜಿಸ್ಟ್ರರ್ ಕಚೇರಿಗೆ ಜನ ಅಲೆದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಯಾವ ತಾಂತ್ರಿಕ ದೋಷದಿಂದ ಈ ಸಮಸ್ಯೆ ಉಂಟಾಗಿದೆಯೋ ಅದನ್ನು ತಕ್ಷಣ ಸರಿಪಡಿಸಬೇಕು ಮತ್ತು ಇ ಖಾತೆಯಲ್ಲಿನ ಲೋಪದೋಷವನ್ನು ಸರಿಪಡಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಶಾಸಕರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ತಕ್ಷಣವೇ ಅಧಿಕಾರಿಗಳಲ್ಲಿ ಈ ಜೊತೆ ಚರ್ಚೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ.

ಕೋಟ್

ಸಬ್‌ರಿಜಿಸ್ಟ್ರರ್ ಕಚೇರಿಯಲ್ಲಿನ ತಾಂತ್ರಿಕ ದೋಷ ಮತ್ತು ಇ ಖಾತೆಯಲ್ಲಿನ ಲೋಪದೋಷದ ಬಗ್ಗೆ ಕಂದಾಯ ಸಚಿವರ ಗಮನಕ್ಕೆ ತಂದಿದ್ದೇನೆ, ತಕ್ಷಣ ಕ್ರಮಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ನನ್ನ ಕ್ಷೇತ್ರ ವ್ಯಾಪ್ತಿಯ ಜನರಿಗೆ ಯಾವುದೇ ತೊಂದರೆಯಾಗಬಾರದು, ತೊಂದರೆಯಾದರೆ ನಾನು ಆ ಬಗ್ಗೆ ಸುಮ್ಮನೆ ಇರುವುದಿಲ್ಲ. ಕಂದಾಯ ಇಲಾಖೆಯಲ್ಲಿನ ಎಲ್ಲಾ ರೀತಿಯ ಸಮಸ್ಯೆಗಳ ಬಗ್ಗೆಯೂ ಸಚಿವರ ಜೊತೆ ಚರ್ಚೆ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ವ್ಯವಸ್ಥೆಯಲ್ಲಿನ ಲೋಪಗಳು ಪರಿಹಾರವಾಗುವ ಸಂಪೂರ್ಣ ಭರವಸೆ ಇದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಾಂತೇರಿ ಜುಮಾದಿಗೆ ‘ಕಾಂತಾರ’ದಂತ ಭೀತಿ!! ಇದು ದಂತಕಥೆಯಲ್ಲ; ನೈಜಕಥೆ-  ಸೆಝ್’ನಿಂದ ಹೊಸ ತಪರಾಕಿ!

ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ…