ಕರಾವಳಿ

ಸಾಲ್ಮರ: ಮೃತ ಕೂಲಿ ಕಾರ್ಮಿಕನನ್ನು ರಸ್ತೆ ಬದಿ ಮಲಗಿಸಿ ಹೋದ ಪ್ರಕರಣ: ಮೂವರ ವಿರುದ್ಧ ಪ್ರಕರಣ  ದಾಖಲು.!

ಮೇಸ್ತ್ರೀ ಸಹಾಯಕರಾಗಿ ಕೆಲಸಕ್ಕೆ ಹೋಗುತ್ತಿದ್ದ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡಿಸಿಕೊಂಡ ಮಾಲಕರ ಸಹಿತ ಮೂವರ ವಿರುದ್ದ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮೇಸ್ತ್ರೀ ಸಹಾಯಕರಾಗಿ ಕೆಲಸಕ್ಕೆ ಹೋಗುತ್ತಿದ್ದ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡಿಸಿಕೊಂಡ ಮಾಲಕರ ಸಹಿತ ಮೂವರ ವಿರುದ್ದ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ಶಿವಪ್ಪ ಅವರ ಅಳಿಯ ಶಶಿ ಕೆರೆಮೂಲೆ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

SRK Ladders

ನ.16ರಂದು ಬೆಳಿಗ್ಗೆ ತಾವೋ ವುಡ್ ಇಂಡಸ್ಟ್ರೀಸ್ ನ ಮಾಲೀಕರಾದ ಹೆನ್ರಿ ತಾಮ್ರ ಅವರು ಶಿವಪ್ಪ ಅವರನ್ನು ಮರದ ಕೆಲಸಕ್ಕೆ ಕರೆದುಕೊಂಡು ಹೋಗಿದ್ದು ಬಳಿಕ ಅವರನ್ನು ಹೆನ್ರಿ ತಾವೋ, ಸ್ಪ್ಯಾನಿ  ಹಾಗೂ ಇನ್ನೊಬ್ಬರು ಸೇರಿ ಪಿಕಪ್ ವಾಹನದಲ್ಲಿ ಮರದ ದಿಮ್ಮಿಗಳ ಮೇಲೆ ಮಲಗಿಸಿಕೊಡು ಬಂದು ಶಿವಪ್ಪ ಅವರ ಮನೆಯ ಬಳಿ ರಸ್ತೆ ಬದಿಯಲ್ಲಿ ಮಲಗಿಸಿ ಹೋಗಿದ್ದರು.

ಶಿವಪ್ಪ ಅವರು ಮಾತನಾಡದೇ ಇದ್ದಾಗ ಅವರ ಪತ್ನಿ ಮತ್ತು ಮಗಳು ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಶಿವಪ್ಪ ಅವರು ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದರು.

ಹಾಗಾಗಿ ಆರೋಗ್ಯದಲ್ಲಿದ್ದ ನನ್ನ ಮಾವ ಶಿವಪ್ಪ ಅವರನ್ನು ಮರದ ಕೆಲಸಕ್ಕೆಂದು ಕರೆದು ಕೊಂಡು ಹೋದಾಗ ಅವರ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಿದ ಹೆನ್ರಿ ತಾವೋ ಅವರು ಅಮಾನವೀಯವಾಗಿ ಪಿಕಪ್‌ನಲ್ಲಿ ತಂದು ರಸ್ತೆ ಬದಿಯಲ್ಲಿ ಮಲಗಿಸಿ ಹೋಗಿರುವುದು ಪರಿಶಿಷ್ಟ ಜಾತಿಯವರಿಗೆ ಅನ್ಯಾಯ ಮಾಡಿದಂತಾಗಿದೆ.

ಅವರು ದಲಿತ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು. ಅವರ ದೂರಿನಂತೆ ಪೊಲೀಸರು ಹೆನ್ರಿ ತಾವೋ, ಸ್ಪ್ಯಾನಿ ಮೇಸ್ತ್ರಿ ಹಾಗು ಇನ್ನೋರ್ವರ ವಿರುದ್ಧ ಧಲಿತ ದೌರ್ಜನ್ಯ ಪ್ರಕರಣ ದಾಖಲು ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…