ಕರಾವಳಿ

ಪುತ್ತೂರು: ವಿದ್ಯಾರ್ಥಿ ನಾಪತ್ತೆ; ಗುಲ್ಬರ್ಗದ ಯುವಕನಿಗೆ ನ್ಯಾಯಾಂಗ ಬಂಧನ!!

GL
ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಗುಲ್ಬರ್ಗ ಮೂಲದ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸ ಪ್ರಕರಣ ದಾಖಲಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಗುಲ್ಬರ್ಗ ಮೂಲದ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸ ಪ್ರಕರಣ ದಾಖಲಾಗಿದೆ.

chennai-shopping
maithri

ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪಿ.ಜಿ.ಯಿಂದ ಕಾಲೇಜಿಗೆ ಹೋಗುತ್ತಿದ್ದರು.

ನ.16ರಿಂದ ಆಕೆ ಪಿ.ಜಿ.ಯಿಂದ ನಾಪತ್ತೆಯಾಗಿದ್ದರು.ಈ ಕುರಿತು ವಿದ್ಯಾರ್ಥಿನಿಯ ತಾಯಿ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು.

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಗುಲ್ಬರ್ಗ ಮೂಲದ ಕಾರ್ತಿಕ್‌ ಎಂಬಾತ ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿರುವುದಾಗಿ ತನಿಖೆ ವೇಳೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪ ಪ್ರಕರಣ ದಾಖಲಿಸಿಕೊಂಡಿರುವ ಮಹಿಳಾ ಠಾಣೆ ಪೊಲೀಸರು ನ.17ರಂದು ಆರೋಪಿ ಕಾರ್ತಿಕ್‌ನನ್ನು ಗುಲ್ಬರ್ಗಾದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts