tamanvi
ಕರಾವಳಿ

ಉಡುಪಿ: ಯುವತಿ ಆತ್ಮಹತ್ಯೆ!!

ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ : ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ.

ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ.ಮೃತ ಯುವತಿ ಕೀರ್ತನಾ ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಮದುವೆ ನಿಶ್ಚಯ ಮಾಡಿ, ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥವನ್ನು ಮಾಡಿದ್ದರು. ಮುಂದಿನ ಕೆಲವು ದಿನಗಳಲ್ಲಿ ಯುವತಿಗೆ ಮದುವೆ ಮಾಡುವುದಕ್ಕೆ ಮನೆಯಲ್ಲಿ ಸಿದ್ಧತೆಯನ್ನೂ ಮಾಡಿಕೊಂಡಿದ್ದರು

ಆದರೆ ಯುವತಿ ಮನೆಯ ಕೋಣೆಯಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಮನೆಯವರು ನೋಡಿ ಆಕೆಯನ್ನು ಕಾಪಾಡಿ ಅರೆ ಪ್ರಜ್ಞಾವಸ್ಥೆ ಸ್ಥಿತಿ ತಲುಪಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು, ಇದೀಗ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು, ಪುತ್ತೂರು, ಸುಳ್ಯದಲ್ಲಿ ಕೋರ್‌ ಮೆಗಾ ಸೇಲ್‌.. ರಿಫರ್ಬಿಶ್ಡ್ ಲ್ಯಾಪ್’ಟಾಪ್ ಖರೀದಿಗೆ ಸಿಗಲಿದೆ ಭರ್ಜರಿ ಆಫರ್ಸ್!!

ಮಂಗಳೂರು: ಪುತ್ತೂರು, ಸುಳ್ಯ ಹಾಗೂ ಮಂಗಳೂರಿನಲ್ಲಿ ಶಾಖೆಗಳನ್ನು ಹೊಂದಿರುವ ಕೋರ್ ಟೆಕ್ನಾಲಜೀಸ್…