ಕರಾವಳಿ

ಮಂಗಳೂರು: ಗಣಿ ಇಲಾಖೆಯ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ!! ಅಧಿಕಾರಿಣಿ ಬಳಿ ಹನ್ನೊಂದು ಕೋಟಿ ಆಸ್ತಿ ಪತ್ತೆ!!

ಕರ್ನಾಟಕ ಲೋಕಾಯುಕ್ತ ಪೊಲೀಸರು ಭ್ರಷ್ಟರ ಬೇಟೆಯಾಡಿದ್ದಾರೆ. ಭ್ರಷ್ಟಚಾರದ ಆರೋಪ ಹೊತ್ತಿದ್ದ ಅಧಿಕಾರಿಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಲೋಕಾಯುಕ್ತ ಟೀಂಗೆ ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಚಿನ್ನದ ಖಜಾನೆ ಸಿಕ್ಕಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಅವರ ಮನೆ, ಕಛೇರಿಗೂ ದಾಳಿ ಮಾಡಿದ್ದಾರೆ. ಈ ವೇಳೆ ಅಪಾರ ಪ್ರಮಾಣ ಸೊತ್ತು ಪತ್ತೆಯಾಗಿದೆ.

SRK Ladders

ಮಂಗಳೂರಿನ ಹಿರಿಯ ಭೂ ವಿಜ್ಞಾನಿ ಎಂ.ಸಿ.ಕೃಷ್ಣವೇಣಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಲೋಕಾಯುಕ್ತ ತಂಡ ಶೋಧ ನಡೆಸಿದೆ.

ಇವರ ಬಳಿ ಒಟ್ಟು ಸ್ಥಿರಾಸ್ತಿಯ ಅಂದಾಜು ಮೌಲ್ಯ 3 ನಿವೇಶನ ಬೆಂಗಳೂರಿನ ಯಲಹಂಕದಲ್ಲಿ 1 ಫ್ಲಾಟ್, ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಸಂಕೀರ್ಣ, 26 ಎಕರೆ ಕೃಷಿ ಜಮೀನು ಇದೆ. ಎಲ್ಲಾ ಸೇರಿ ಒಟ್ಟು ಮೌಲ್ಯ10 ಕೋಟಿ 41 ಲಕ್ಷ 38 ಸಾವಿರ 286 ರೂಪಾಯಿ ಇದೆ.

ಒಟ್ಟು ಚರಾಸ್ತಿಯ ಅಂದಾಜು ಮೌಲ್ಯ 56 ಸಾವಿರದ 450 ರೂಪಾಯಿ ನಗದು, 66 ಲಕ್ಷ 71 ಸಾವಿರದ 445 ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳು, 60 ಲಕ್ಷ ರೂಪಾಯಿ ಬೆಲೆಬಾಳುವ ವಾಹನಗಳು, 24 ಲಕ್ಷ 40 ಸಾವಿರ ರೂಪಾಯಿ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು.

ಈ ಎಲ್ಲಾ ಸೇರಿ ಒಟ್ಟು ಮೌಲ್ಯ 1,51, 67,895 ರೂಪಾಯಿ ಇದ್ದು, ಸ್ಥಿರಾಸ್ತಿ ಹಾಗೂ ಚರಾಸ್ಥಿ ಸೇರಿ ಒಟ್ಟು ಮೌಲ್ಯ 11,93,06,181 ರೂಪಾಯಿ ಇದೆ. ಇದನ್ನೆಲ್ಲಾ ಕಂಡು ಲೋಕಾಯುಕ್ತ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…