ಕರಾವಳಿ

ಫಿಲೋಮಿನಾ ಪ.ಪೂ ಕಾಲೇಜ್:  ‘ಎಟರ್ನಸ್ -2024’ ರನ್ನರ್ ಅಪ್ ಪ್ರಶಸ್ತಿ

ಅಕ್ಷಯ ಕಾಲೇಜು ಪುತ್ತೂರು ಇದರ ಆಶ್ರಯದಲ್ಲಿ ನ16 ರಂದು ನಡೆದ 'ಎಟರ್ನಸ್ - 2024' ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇದರ ಆಶ್ರಯದಲ್ಲಿ ನ16 ರಂದು ನಡೆದ ‘ಎಟರ್ನಸ್ – 2024’ ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ಭಾವಗೀತೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ ಪ್ರಥಮ, ವೈಯಕ್ತಿಕ ನೃತ್ಯ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ತ್ರಿಷಾ ಕೆ.ಬಿ ದ್ವಿತೀಯ, ಮಾಡೆಲ್ ಪ್ರೆಸೆಂಟೇಷನ್ ನಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಯಶವಂತ್ ಮತ್ತು ಗಗನ್ ಪ್ರಥಮ, ವೆಲ್ತ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಪ್ರಜೋಶ್ ಮತ್ತು ನಿಖಿಲ್ ದ್ವಿತೀಯ ಹಾಗೂ Mr & Ms ಎಟರ್ನಸ್ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಹಶೀಮ್ ಪ್ರಥಮ ಮತ್ತು ನಾಟ್ ಎದುಕ್ಕೆ ನಾಫಿಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

SRK Ladders

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ರಶ್ಮಿ ಪಿ ಎಸ್ ಹಾಗೂ ಭರತ್ ಜಿ. ಪೈ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…