ಕರಾವಳಿ

ಗುಂಡ್ಯ: ಸರಣಿ ಅಪಘಾತ-ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯ!!

ಖಾಸಗಿ ಬಸ್, ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗುಂಡ್ಯ: ಖಾಸಗಿ ಬಸ್, ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ.

ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…