ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಬಂಟ್ವಾಳ ಇದರ ತೃತೀಯ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.
ದೇವಳದ ಕಾರ್ಯನಿರ್ವಹಣಾಧಿಕಾರಿ ಕೆ.ವಿ ಶ್ರೀನಿವಾಸ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಮಾತನಾಡಿ ಡಿಸೆಂಬರ್ 22 ರಂದು ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ಬೆಳಿಗ್ಗೆ ಗಂಟೆ 9:30 ರಿಂದ ಜರಗಲಿರುವ ಕಾರ್ಯಕ್ರಮದಲ್ಲಿ ಪರಮಪೂಜ್ಯ ಎಡನೀರು ಶ್ರೀಗಳಿಂದ ಆಶೀರ್ವಚನ, ಸಾಧಕರಿಗೆ ಸನ್ಮಾನ,ಗೌರವಾರ್ಪಣೆ, ಆರೋಗ್ಯ ಮಾಹಿತಿ, ಸೇವಾ ಕಾರ್ಯಗಳ ಸಮರ್ಪಣೆ ಮತ್ತು ಯಕ್ಷಗಾನ ತಾಳ ಮದ್ದಳೆ ಜರಗಲಿದೆ ಎಂದು ತಿಳಿಸಿದರು.
ಪುತ್ತೂರು ಘಟಕದ ಗೌರವಾಧ್ಯಕ್ಷ ಪದ್ಮಯ್ಯ ಎಚ್, ಅಧ್ಯಕ್ಷ ಚಂದ್ರಶೇಖರ್ ಆಳ್ವ ಪಡುಮಲೆ,ಕೇಂದ್ರ ಸಮಿತಿಯ ಪದಾಧಿಕಾರಿಗಳಾದ ರಾಮಕೃಷ್ಣ ನಾಯಕ್ ಕೋಕಳ, ವೇದವ್ಯಾಸ ರಾಮಕುಂಜ, ಶ್ರೀದೇವಿ ಕೈಯೂರು, ಸೋಮನಾಥ ಬೇಕಲ್ ಉಪಸ್ಥಿತರಿದ್ದರು. ಪ್ರತಿಷ್ಠಾನದ ಸಹ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿ ಟ್ರಸ್ಟಿ ಲೋಕೇಶ ಹೆಗ್ಡೆ ಪುತ್ತೂರು ವಂದಿಸಿದರು.
.