ಕರಾವಳಿ

ಪುತ್ತೂರು: ಬೈಕ್ ಡಿಕ್ಕಿ ಮಹಿಳೆ ಮೃತಪಟ್ಟ ಪ್ರಕರಣ: ಸವಾರನಿಗೆ ದಂಡ, ಮಾಲಕನಿಗೆ ಜೈಲು ಶಿಕ್ಷೆ!!

ನೆಟ್ಟಣಿಗೆಮುಡೂರು ಕೊಟ್ಯಾಡಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಯೋರ್ವರಿಗೆ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಚಾಲನಾ ಪರವಾನಿಗೆ ಇಲ್ಲದ ಆರೋಪಿ ಬೈಕ್ ಸವಾರನಿಗೆ ದಂಡ ವಿಧಿಸಿದ್ದು ಬೈಕ್ ಮಾಲಕನಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಟ್ಟಣಿಗೆ ಮುಡೂರು ಕೊಟ್ಯಾಡಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಯೋರ್ವರಿಗೆ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಚಾಲನಾ ಪರವಾನಿಗೆ ಇಲ್ಲದ ಆರೋಪಿ ಬೈಕ್ ಸವಾರನಿಗೆ ದಂಡ ವಿಧಿಸಿದ್ದು ಬೈಕ್ ಮಾಲಕನಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2022ರ ಫೆ.27ರಂದು ನೆಟ್ಟಣಿಗೆಯ ಕೊಟ್ಯಾಡಿ ಎಂಬಲ್ಲಿ ಮುಳಿಯೂರು ನಿವಾಸಿ ಶಾಹೀದ್(24ವ)ರವರು ಚಲಾಯಿಸುತ್ತಿದ್ದ ಕೇರಳ ರಾಜ್ಯದ ನೋಂದಾವಣೆಯ ಬೈಕ್ ಕೊಟ್ಯಾಡಿ ರಸ್ತೆ ಬದಿಯಲ್ಲಿ ನಿಂತಿದ್ದ ಕೊಟ್ಯಾಡಿ ನಿವಾಸಿ ದುಗ್ಗಮ್ಮ (55ವ) ಎಂಬವರಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ದುಗ್ಗಮ್ಮ ಅವರು ಮೃತಪಟ್ಟಿದ್ದರು.ಬೈಕ್‌ನಲ್ಲಿದ್ದ ಸಹಸವಾರೆ ನೆಬಿಸಾ ಅವರು ಗಾಯಗೊಂಡಿದ್ದರು.ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಸಂಪ್ಯ ಪೊಲೀಸ್ ಠಾಣೆಯ ಆಗಿನ ಎಸ್.ಐ ರವಿ.ಬಿ.ಎಸ್ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಬೈಕ್‌ ಸವಾರ ಶಾಹೀದ್ ಅವರಿಗೆ ಚಾಲನಾ ಪರವಾನಿಗೆ ಇಲ್ಲದಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬೈಕ್ ಮಾಲಕ ಮುಳಿಯೂರು ನಿವಾಸಿ ಮಹಮ್ಮದ್ ಶಾಕೀರ್ ಅವರ ವಿರುದ್ದವೂ ಪ್ರಕರಣ ದಾಖಲಿಸಿಕೊಂಡಿದ್ದರು.

SRK Ladders

ಬೈಕ್‌ ಸವಾರ ಶಾಹೀದ್ ವಿರುದ್ಧ ಸೆಕ್ಷನ್ 3(1)/ಆರ್‌ವೈಡಬ್ಲ್ಯಾರ್/ ಡ 181 ಐಎಮ್‌ವಿ ಮೋಟಾರು ಕಾಯ್ದೆಯಂತೆ ಮತ್ತು ಬೈಕ್‌ ಮಾಲಕ ಮಹಮ್ಮದ್ ಶಾಕೀರ್ ಅವರ ವಿರುದ್ಧ ಸೆಕ್ಷನ್ 279, 338, 304(ಎ)1 ರಂತೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ಪುತ್ತೂರು ಹೆಚ್ಚುವರಿ ಹಿರಿಯ ವ್ಯವಹಾರಿಕ ನ್ಯಾಯಾಧೀಶ ದೇವರಾಜ್ ವೈ.ಎಚ್. ಅವರು ಚಾಲನಾ ಪರವಾನಿಗೆ ಇಲ್ಲದ ಬೈಕ್ ಸವಾರ ಶಾಹೀದ್ ಅವರಿಗೆ ರೂ.5 ಸಾವಿರ ದಂಡ ವಿಧಿಸಿ,ಬೈಕ್ ಮಾಲಕ ಮಹಮ್ಮದ್ ಶಾಕೀರ್ ಅವರಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ರೂ.5 ಸಾವಿರ ದಂಡ ವಿದಿಸಿ,  ತೀರ್ಪು ನೀಡಿದರು ಪ್ರಾಸಿಕ್ಯೂಷನ್ ಪರ ಸಹಾಯಕ ಸರಕಾರಿ ಅಭಿಯೋಜಕಿ ಚೇತನಾದೇವಿ ವಾದಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…