tamanvi
ಕರಾವಳಿ

ಕಡಬ : ನಾಪತ್ತೆಯಾಗಿದ್ದ ಸಂದೀಪ್ ಗೌಡನ ಮೃತದೇಹ ಪತ್ತೆ! ಪರಿಚಿತ ಯುವಕನಿಂದಲೆ ಹತ್ಯೆ;  ತನಿಖೆಯ ಸುತ್ತ ಮೂಡಿದೆ ಹಲವು ಅನುಮಾನ

ವಾರದ ಹಿಂದೆ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಯುವಕನ ಮೃತದೇಹ   ಡಿ 2 ರಂದು ಸಂಜೆ ನೆಟ್ಟಣ ರೈಲು ನಿಲ್ದಾಣದಿಂದ ಒಂದೂವರೆ ಕಿಮೀ ದೂರದ ನಾರಡ್ಕ ಬಳಿ ದಟ್ಟ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ : ವಾರದ ಹಿಂದೆ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಯುವಕನ ಮೃತದೇಹ   ಡಿ 2 ರಂದು ಸಂಜೆ ನೆಟ್ಟಣ ರೈಲು ನಿಲ್ದಾಣದಿಂದ ಒಂದೂವರೆ ಕಿಮೀ ದೂರದ ನಾರಡ್ಕ ಬಳಿ ದಟ್ಟ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪರಿಚಿತ ಯುವಕನೇ ಆತನನ್ನು ಹತ್ಯೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಕಾಡಿನ ಮಧ್ಯೆ ಸುಟ್ಟು ಹಾಕಿರುವುದಾಗಿ ತಿಳಿದು ಬಂದಿದೆ

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಕೊಲೆಯಾದ ಯುವಕ. ಕಡಬ ತಾಲೂಕಿನ ನೆಟ್ಟಣ ಚೆಂಡೆಹಿತ್ತಿಲು ನಿವಾಸಿ ಕುಶಾಲಪ್ಪ ಎಂಬವರ ಪುತ್ರ ಪ್ರತಿಕ್ ಎಂಬಾತನನ್ನು ಕೊಲೆ ಆರೋಪದಲ್ಲಿ ಪೊಲೀಸರು ಭಾನುವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.

ಮೂಲಗಳ ಪ್ರಕಾರ ಪೊಲೀಸ್ ವಿಚಾರಣೆ ವೇಳೆ ಆತ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಹತ್ಯೆ ನಡೆಸಿದ ಬಳಿಕ ಮೃತದೇಹವನ್ನು ಕಾಡಿನಲ್ಲಿ ಪೆಟ್ರೋಲ್ ಸುರಿದು ಸುಟ್ಟಿರುವುದಾಗಿ ಬಾಯ್ದಿಟ್ಟಿದ್ದಾನೆ ಎನ್ನಲಾಗಿದೆ. ಅಲ್ಲದೇ ಕಾಡಿನಲ್ಲಿ ಮರವೊಂದರ ಕೆಳಗಡೆ ಶವವನ್ನು ಬೀಸಾಡಿರುವುದನ್ನು ಪ್ರತಿಕ್ ವಿಚಾರಣೆ ಸಂದರ್ಭ ತಿಳಿಸಿದ್ದಾನೆ. ಹೀಗಾಗಿ  ಪೊಲೀಸರು ಶವವನ್ನು ಪತ್ತೆ ಹಚ್ಚುವ ವೇಳೆ ಅತನನ್ನು ಕರೆದುಕೊಂಡು ಬಂದಿದ್ದರು ಆತ ತಿಳಿಸಿದ ಸ್ಥಳದಲ್ಲೆ ಸಂದೀಪ್ ಶವ ದೊರೆತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…