ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಹಲವು ಅಂಗಡಿಗಳಿಗೆ ಅಧಿಕಾರಿಗಳು ದಾಳಿ ಮಾಡಿ ಭಾರೀ ಪ್ರಮಾಣದಲ್ಲಿ ತಂಬಾಕು ಉತ್ಪನ್ನ ಸಹಿತ ನಿಷೇಧಿತ ಪಾಸ್ಟಿಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಡಿ.3 ರಂದು ನಡೆದಿದೆ.
ಅಂಗಡಿಗಳಿಂದ ವಿವಿಧ ಕಂಪೆನಿಗಳ ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನ ಹಾಗೂ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.
ಕುಕ್ಕೆ ದೇಗುಲದ ಪರಿಸರದಲ್ಲಿ ಇಲ್ಲಿಯೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಸೂಚನೆ ನೀಡಿದ್ದಲ್ಲದೆ ಅಂತಹ ವಿಚಾರ ಗಮನಕ್ಕೆ ಬಂದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ವರ್ತಕರಿಗೆ ಎಚ್ಚರಿಕೆ ನೀಡಿದ್ದಾರೆ.
ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ನಂದಕುಮಾರ್, ವೈದ್ಯಾಧಿಕಾರಿ ತ್ರಿಮೂರ್ತಿ, ಗ್ರಾ.ಪಂ ಪಿಡಿಒ ಮಹೇಶ್, ಕಾರ್ಯದರ್ಶಿ ಮೋನಪ್ಪ, ಗ್ರಾ.ಪಂ ಅಧ್ಯಕ್ಷೆ ಸುಜಾತ, ಮಾಜಿ ಅಧ್ಯಕ್ಷೆ ಲಲಿತಾ ಗುಂಡಡ್ಕ, ಸದಸ್ಯೆ ಭಾರತಿ ಜತೆಗಿದ್ದರು.