tamanvi
ಕರಾವಳಿ

ಸುಬ್ರಹ್ಮಣ್ಯ: ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀ‌ರ್ ದಾಳಿ|  ನಿಷೇಧಿತ ಪಾಸ್ಟಿಕ್, ತಂಬಾಕು ಉತ್ಪನ್ನಗಳ ವಶ। 

ಕುಕ್ಕೆ ಸುಬ್ರಹ್ಮಣ್ಯದ ಹಲವು ಅಂಗಡಿಗಳಿಗೆ ಅಧಿಕಾರಿಗಳು ದಾಳಿ ಮಾಡಿ ಭಾರೀ ಪ್ರಮಾಣದಲ್ಲಿ ತಂಬಾಕು ಉತ್ಪನ್ನ ಸಹಿತ ನಿಷೇಧಿತ ಪಾಸ್ಟಿಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಡಿ.3 ರಂದು ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಹಲವು ಅಂಗಡಿಗಳಿಗೆ ಅಧಿಕಾರಿಗಳು ದಾಳಿ ಮಾಡಿ ಭಾರೀ ಪ್ರಮಾಣದಲ್ಲಿ ತಂಬಾಕು ಉತ್ಪನ್ನ ಸಹಿತ ನಿಷೇಧಿತ ಪಾಸ್ಟಿಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಡಿ.3 ರಂದು ನಡೆದಿದೆ.

ಅಂಗಡಿಗಳಿಂದ ವಿವಿಧ ಕಂಪೆನಿಗಳ ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನ ಹಾಗೂ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಕುಕ್ಕೆ ದೇಗುಲದ ಪರಿಸರದಲ್ಲಿ ಇಲ್ಲಿಯೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಸೂಚನೆ ನೀಡಿದ್ದಲ್ಲದೆ ಅಂತಹ ವಿಚಾರ ಗಮನಕ್ಕೆ ಬಂದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ವರ್ತಕರಿಗೆ ಎಚ್ಚರಿಕೆ ನೀಡಿದ್ದಾರೆ.

ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ನಂದಕುಮಾ‌ರ್, ವೈದ್ಯಾಧಿಕಾರಿ ತ್ರಿಮೂರ್ತಿ, ಗ್ರಾ.ಪಂ ಪಿಡಿಒ ಮಹೇಶ್, ಕಾರ್ಯದರ್ಶಿ ಮೋನಪ್ಪ, ಗ್ರಾ.ಪಂ ಅಧ್ಯಕ್ಷೆ ಸುಜಾತ, ಮಾಜಿ ಅಧ್ಯಕ್ಷೆ ಲಲಿತಾ ಗುಂಡಡ್ಕ, ಸದಸ್ಯೆ ಭಾರತಿ ಜತೆಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…