tamanvi
ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು!!

D_shiva_bhat
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಢಿಕ್ಕಿಹೊಡೆದು ಪಲ್ಟಿಯಾದ ಪರಿಣಾಮ ಡಿ.8ಕ್ಕೆಕೊಯನಾಡಿನಲ್ಲಿ ಸಂಭವಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಢಿಕ್ಕಿಹೊಡೆದು ಪಲ್ಟಿಯಾದ ಪರಿಣಾಮ ಡಿ.8ಕ್ಕೆಕೊಯನಾಡಿನಲ್ಲಿ ಸಂಭವಿಸಿದೆ

maithri

ಮಡಿಕೇರಿ ಮೂಲದ ಇಬ್ಬರು ಪ್ರಯಾಣಿಸುತ್ತಿದ್ದ ವ್ಯಾಗನಾ‌ರ್ ಕಾರು ಕೊಯನಾಡಿಗೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಚರಂಡಿಗೆ ಇಳಿದು, ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಯಿತೆನ್ನಲಾಗಿದೆ. ಪರಿಣಾಮವಾಗಿ ಚಾಲಕ ಹಾಗೂ ಮುಂಭಾಗದಲ್ಲಿ ಕುಳಿತಿದ್ದ ವ್ಯಕ್ತಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯರ ಸಹಕಾರದಿಂದ ಸುಳ್ಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರೆಂದು ತಿಳಿದುಬಂದಿದೆ. ಬಳಿಕ ಪಲ್ಟಿಯಾದ ಕಾರನ್ನು ಕೊಯನಾಡಿನ ಗ್ರಾಮಸ್ಥರು ಮೇಲೆತ್ತಿದ್ದಾರೆ ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…