tamanvi
ಕರಾವಳಿ

ಮುರುಡೇಶ್ವರ: ಮೂವರು ವಿದ್ಯಾರ್ಥಿನಿಯರು ಸಮುದ್ರ ಪಾಲು; ಓರ್ವಳ ಶವ ಪತ್ತೆ!!

D_shiva_bhat
ಸಮುದ್ರ ತೀರದಲ್ಲಿ ದುರಂತ ಸಂಭವಿಸಿದ್ದು ಮುಳಬಾಗಿಲು ಪಟ್ಟಣ ದಿಂದ ಪ್ರವಾಸಕ್ಕೆ ಬಂದಿದ್ದ 54 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಸಮುದ್ರ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರವಾರ: ಮುರುಡೇಶ್ವರ ಸಮುದ್ರ ತೀರದಲ್ಲಿ ದುರಂತ ಸಂಭವಿಸಿದ್ದು ಮುಳಬಾಗಿಲು ಪಟ್ಟಣ ದಿಂದ ಪ್ರವಾಸಕ್ಕೆ ಬಂದಿದ್ದ 54 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಸಮುದ್ರ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.

maithri

ವಿದ್ಯಾರ್ಥಿಗಳು ಕಡಲತೀರದಲ್ಲಿ ಇಳಿದು ಆಟವಾಡುತ್ತಿದ್ದರು. ಈ ವೇಳೆ ಏಳು ಜನ ವಿದ್ಯಾರ್ಥಿಗಳು ಅಲೆಯ ರಭಸಕ್ಕೆ ಕೊಚ್ಚಿ ಹೋದರು. ಲೈಫ್ ಗಾರ್ಡ್ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಿದರು. ಈ ವೇಳೆ ನಾಲ್ವರು ಆಳ ಸಮುದ್ರಕ್ಕೆ ತೇಲಿ ಹೋದರು. ಒಬ್ಬ ವಿದ್ಯಾರ್ಥಿ ಶ್ರಾವಂತಿ(15) ಮೃತ ದೇಹ ಪತ್ತೆಯಾಗಿದೆ. ದೀಪಾ, ಲಾವಣ್ಯ, ಲಿಪಿಕಾ ಅವರಿಗೆ ಹುಡುಕಾಟ ನಡೆದಿದೆ. ಪೊಲೀಸರು ಸ್ಥಳದಲ್ಲಿದ್ದು, ದುರಂತವನ್ನು ದಾಖಲಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಸ್ನೇಹಿತೆಯರನ್ನು ಕಳೆದು ಕೊಂಡು ದುಃಖಿತರಾಗಿದ್ದಾರೆ. ಕೋಲಾರದ ಮುಳುಬಾಗಿಲು ಶಾಲೆ ಯಿಂದ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…