ಕರಾವಳಿ

ಸೋಮೇಶ್ವರ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!

ಸೋಮೇಶ್ವರ ರುದ್ರಪಾದೆಯಿಂದ  ಹಾರಿದ ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ  ಹಾರಿದ ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ.

akshaya college

ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿರುವ ಅವರು ಮಧ್ಯಾಹ್ನ ಸೋಮೇಶ್ವರ ಸಮುದ್ರ ತೀರಕ್ಕೆ ಬಂದವರು ದ್ವಿಚಕ್ರ ವಾಹನ ಸಹಿತ ತನ್ನ ಬಳಿಯಿದ್ದ ಸೊತ್ತುಗಳನ್ನೆಲ್ಲಾ ಮೇಲಿಟ್ಟು ಸಮುದ್ರಕ್ಕೆ ಹಾರಿದ್ದಾರೆ.

ಸಮುದ್ರ ತೀರದಲ್ಲಿದ್ದ ಯುವಕನೋರ್ವ ಸೊತ್ತುಗಳನ್ನು ಕಂಡು ಸಮೀಪದ ಅಂಗಡಿಯವರಲ್ಲಿ ನೀಡಿದ್ದಾರೆ. ಅವರು ಉಳ್ಳಾಲ ಪೊಲೀಸರಿಗೆ ನೀಡಿದ ಮಾಹಿತಿ ನಂತರ, ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಸಮುದ್ರದಲ್ಲಿ ಉದಯ್ ಗಾಗಿ ಟಯ‌ರ್ ಟ್ಯೂಬ್ ಬಳಸಿ ಶೋಧ ನಡೆಸಿದ್ದಾರೆ.ಸಂಜೆ ವೇಳೆ ಮೃತದೇಹ ಪತ್ತೆಯಾಗಿದ್ದು, ಮೃತರು ತಂದೆ, ತಾಯಿ, ಪತ್ನಿ, ಒರ್ವ ಪುತ್ರನನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…