ಕರಾವಳಿ

ಬಲ್ನಾಡು ಗ್ರಾಮ ಅರಣ್ಯ ಸಮಿತಿಯ ನೂತನ ಅಧ್ಯಕ್ಷರಾಗಿ  ಸಾಜ ರಾಧಾಕೃಷ್ಣ ಆಳ್ವ ಆಯ್ಕೆ

ಬಲ್ನಾಡು ಗ್ರಾಮ ಅರಣ್ಯ ಸಮಿತಿ ಕಾರ್ಯಕಾರಿಣಿಗೆ ಮುಂದಿನ 5 ವರ್ಷಕ್ಕೆ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಲ್ನಾಡು ಗ್ರಾಮ ಅರಣ್ಯ ಸಮಿತಿ ಕಾರ್ಯಕಾರಿಣಿಗೆ ಮುಂದಿನ 5 ವರ್ಷಕ್ಕೆ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ.

ಬಲ್ನಾಡು ಗ್ರಾಮದ ಸಾಜ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ಸಮಿತಿ ಸದಸ್ಯ ಕಾರ್ಯದರ್ಶಿಯಾಗಿ ಉಪವಲಯ ಅರಣ್ಯಾಧಿಕಾರಿ ವೀರಣ್ಣರಿದ್ದು, ಸಮಿತಿಯಲ್ಲಿ 172 ಮಂದಿ ಸದಸ್ಯರ ಪೈಕಿ ಚಂದಪ್ಪ ಪೂಜಾರಿ ಕೆ, ಸುಂದರ ಎಂ, ಕುಟ್ಟಿನಲಿಕೆ ಕೆ, ಪ್ರವೀಣಚಂದ್ರ ಆಳ್ವ, ಅಣ್ಣಿ ಪೂಜಾರಿ ಸಾರ್ಯ, ಉಷಾ ಸಾಜ, ಕಮಲಾಕ್ಷಿ ಸಾಜ, ವಸಂತಿ ಸಾಜ, ನಳಿನಿ ಕೆ. ಕುಸುಮ ಎಂ ಅವರು ನಿರ್ದೇಶಕರಾಗಿ ಆಯ್ಕೆಯಾದರು. ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಬಿ.ಎಂ. ಈ ಸಂದರ್ಭ ಉಪಸ್ಥಿತರಿದ್ದರು. ಪುತ್ತೂರು ಹೋಬಳಿಯ ಕಂದಾಯ ನಿರೀಕ್ಷಕ ಕೆ.ಟಿ.ಗೋಪಾಲ ಚುನಾವಣಾಧಿಕಾರಿಯಾಗಿದ್ದರು.

SRK Ladders

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…