ಕರಾವಳಿ

ಡಿ. 14ರಂದು ಸಾವರ್ಕರ್ ಸಭಾಭವನ ಉದ್ಘಾಟನೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಹವಾನಿಯಂತ್ರಿತ ಸಭಾಂಗಣ

ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣದ ಉದ್ಘಾಟನೆ ಡಿ. 14ರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ 

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣದ ಉದ್ಘಾಟನೆ ಡಿ. 14ರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕಾಲೇಜು ಆಡಳಿತ ಮಂಡಳಿ ಸಂಚಾಲಕ ಸುಬ್ರಮಣ್ಯ ಭಟ್ ಟಿ.ಎಸ್. ಹೇಳಿದರು.

akshaya college

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶ್ಯಾಮ್ ಭಟ್ ಐಎಎಸ್ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಸಲಹಾ ಸಮಿತಿಯ ಸದಸ್ಯ ಮತ್ತು ಸೇತುಬಂಧು- ಬ್ರಿಡ್ಜ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಹಾಗೂ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಸಲಹಾ ಸಮಿತಿಯ ಇನ್ನೊರ್ವ ಸದಸ್ಯ ಸ್ವಿಸ್ ಸಿಂಗಾಪುರ ಓವರ್‌ಸೀಸ್ ಎಂಟರ್‌ ಪ್ರೈಸಸ್ ಸಿಂಗಾಪುರ ಇದರ ಮಾಜಿ ಅಧ್ಯಕ್ಷ ಚಂದ್ರಕಾಂತ್ ರಾವ್ ಐ ಅಭ್ಯಾಗತರಾಗಿ ಉಪಸ್ಥಿತರಿರುವರು ಎಂದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್, ನಿರ್ದೇಶಕ ಬಲರಾಮ ಆಚಾರ್ಯ ಜಿ, ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್ ಟಿ.ಎಸ್, ಕೋಶಾಧಿಕಾರಿ ಮುರಳೀಧರ ಭಟ್ ಮತ್ತು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿರುವರು ಎಂದರು.

ದಿ. ಜಿ.ಎಲ್. ಆಚಾರ್ಯ ಅವರ 100ನೇ ಜನ್ಮದಿನಾಚರಣೆಯ ಸವಿ ನೆನಪಿನಲ್ಲಿ ಕಾಲೇಜಿನ ಮುಂಭಾಗದಲ್ಲಿ ನೂತನವಾಗಿ ನಿರ್ಮಿಸಿದ ಕಾರಂಜಿಯ ಹಸ್ತಾಂತರ ಕಾರ್ಯಕ್ರಮವೂ ಇದೇ ಸಂದರ್ಭ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೋಶಾಧಿಕಾರಿ ಮುರಳೀಧರ ಭಟ್, ನಿರ್ದೇಶಕ ರವಿಕೃಷ್ಣ ಡಿ. ಕಲ್ಲಾಜೆ, ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ ಕೆ ಮತ್ತು ಮಾಧ್ಯಮ ವಿಭಾಗದ ಸಹ ಸಂಯೋಜಕ ಹರಿಪ್ರಸಾದ್ ಡಿ. ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆ. 30ರಂದು ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ | ಸಾರ್ವಜನಿಕರಿಗೂ ಜಿಲ್ಲಾಧಿಕಾರಿ ನೀಡಿದ್ದಾರೆ ಸೂಚನೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ…