ಕರಾವಳಿ

ಆನೆ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜಾ!

ಶಾಸಕ ಹರೀಶ್ ಪೂಂಜ ಅವರು ಕಾಡಿನಂಚಿನ ಜನರಿಗೆ ತೊಂದರೆ ಕೊಡುತ್ತಿರುವ ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂಬ ಹೇಳಿಕೆಯನ್ನು ನೀಡಿದ್ದು ಇದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಕಾಡಿನಂಚಿನ ಜನರಿಗೆ ತೊಂದರೆ ಕೊಡುತ್ತಿರುವ ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂಬ ಹೇಳಿಕೆಯನ್ನು ನೀಡಿದ್ದು ಇದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ ಎಂದು ತಿಳಿಸಿದ್ದಾರೆ.

akshaya college

ಇದಕ್ಕೆ ಧ್ವನಿಗೂಡಿಸಿದ ಸ್ಪೀಕರ್ ಖಾದರ್ ಹರೀಶ್ ಪೂಂಜಾ ಹೇಳಿಕೆ ವಿರೋಧಿಸಿ, ಮನುಷ್ಯರಂತೆ ಪ್ರಾಣಿಗಳಿಗೂ ಬದುಕುವ ಹಕ್ಕಿದೆ ಎಂದರು. ಹರೀಶ್ ಪೂಂಜಾರ ಮಾತಿಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ.

ಪ್ರಶೋತ್ತರ ಕಲಾಪದಲ್ಲಿ ಉತ್ತರಿಸಿದ ಅವರು, ಆನೆಗಳ ಹಾವಳಿ ತಡೆಗೆ ಕಳೆದ 2 ವರ್ಷಗಳಲ್ಲಿ 489.46 ಮೀ. ಸೌರಬೇಲಿ, 284.82 ಆನೆ ತಡೆ ಕಂದಕ ನಿರ್ಮಾಣ ಮತ್ತು ನಿರ್ವಹಣೆ ಮಾಡಲಾಗುತ್ತಿದೆ. ಒಟ್ಟು 8 ಆನೆ ಕಾರ್ಯಪಡೆಗಳು ಹಾಸನ, ಚಿಕ್ಕಮಗಳೂರು, ಮೈಸೂರು, ಕೊಡಗು, ರಾಮನಗರ, ಚಾಮರಾಜನಗರ, ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ವನ್ಯಜೀವಿ ದಾಳಿಯಿಂದ ಪ್ರಾಣಹಾನಿ ಆದಾಗ ಕುಟುಂಬದ ಸದಸ್ಯರಿಗೆ 15 ಲಕ್ಷ ರೂ., ಶಾಶ್ವತ ಅಂಗವೈಕಲ್ಯ ಉಂಟಾದರೆ 10 ಲಕ್ಷ ರೂ., ಶಾಶ್ವತವಾದ ಅಂಗ ವೈಕಲ್ಯ ಉಂಟಾದರೆ 5 ಲಕ್ಷ ರೂ., ಗಾಯ ಗೊಂಡ ವ್ಯಕ್ತಿಗೆ 60 ಸಾವಿರ ರೂ. ಕಾಡಾನೆ ದಾಳಿಯಿಂದ ಆಸ್ತಿಪಾಸ್ತಿಗೆ ಹಾನಿ ಉಂಟಾದರೆ ಪ್ರತಿ ಪ್ರಕರಣಕ್ಕೆ 20 ಸಾವಿರ ರೂ., ದಯಾತ್ಮಕ ಪರಿಹಾರ ನೀಡಲಾಗುತ್ತಿದೆ

5 ವರ್ಷಗಳ ಕಾಲ ಮೃತರ ಕುಟುಂಬಕ್ಕೆ ಹಾಗೂ ಶಾಶ್ವತ ಅಂಗವಿಕಲರಾದವರಿಗೆ ಮಾಸಿಕ 4 ಸಾವಿರ ರೂ. ಮಾಸಾಶನವನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು.

ಆನೆಗಳ ಚಲನವಲನ ಗಮನಿಸಲು ರೇಡಿಯೋ ಕಾಲ‌ರ್ ಅಳವಡಿಕೆ

ಅರಣ್ಯ ಸಚಿವ ಈಶ್ವರ ಖಂಡ್ರೆಯವರು ಆನೆಗಳ ಚಲನವಲನ ಗಮನಿಸಲು ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ. ಕಾಡಿನಂಚಿನ ಜನರಿಗೆ ಈ ಬಗ್ಗೆ ನಿತ್ಯ ಸಂದೇಶಗಳ ಮೂಲಕ, ಧ್ವನಿವರ್ಧಕದ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ವನ್ಯಜೀವಿಗಳ ಸಂಚಾರದ ಮೇಲೆ ಕೃತಕ ಬುದ್ದಿಮತ್ತೆ ಆಧಾರಿತ ಕ್ಯಾಮೆರಾ ಅಳವಡಿಸಿ ನಿಗಾ ಇಡಲಾಗಿದೆ ಎಂದು ತಿಳಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ

ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…

ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ

ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…