ಕರಾವಳಿ

ಮಂಗಳೂರು: ಸಿಲಿಂಡರ್‌ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು!!

ಮಂಜನಾಡಿಯಲ್ಲಿ ಸಿಲಿಂಡ‌ರ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮಂಜನಾಡಿಯ ಕಲ್ಕಟ್ಟ ನಿವಾಸಿ ಕುಬ್ರಾ ಮೃತ ದುರ್ದೈವಿ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಂಜನಾಡಿಯಲ್ಲಿ ಸಿಲಿಂಡ‌ರ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮಂಜನಾಡಿಯ ಕಲ್ಕಟ್ಟ ನಿವಾಸಿ ಕುಬ್ರಾ ಮೃತ ದುರ್ದೈವಿ.

ಡಿಸೆಂಬರ್ ಏಳರಂದು ರಾತ್ರಿ ಮನೆಯಲ್ಲಿ ತಾಯಿ ಮತ್ತು ಮೂವರು ಹೆಣ್ಮಕ್ಕಳು ಮಲಗಿದ್ದ ವೇಳೆ ಗ್ಯಾಸ್ ಸಿಲಿಂಡ‌ರ್ ಸ್ಪೋಟಗೊಂಡಿದ್ದು, ಗಂಭೀರ ಗಾಯಗೊಂಡಿದ್ದ ಮನೆಯವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮಕ್ಕಳ ತಾಯಿ ಕುಬ್ರಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

SRK Ladders

ಮಂಜನಾಡಿಯ ಖಂಡಿಗ ನಿವಾಸಿ ವಿದೇಶದಲ್ಲಿರುವ ಮುತ್ತಲಿಬ್ ಎಂಬವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮಕ್ಕಳು ಮನೆಯಲ್ಲಿ ಒಂದೇ ಕೋಣೆಯಲ್ಲಿ ಮಲಗಿದ್ದರು. ಮಧ್ಯರಾತ್ರಿ ಮನೆಯೊಳಗಡೆ ಭಾರೀ ಸೊಗೊಂಡ ಶಬ್ದ ಕೇಳಿ ಬಂದಿದೆ. ಸ್ಫೋಟದ ತೀವ್ರತೆಗೆ ಆರ್‌ಸಿಸಿ ಮನೆಯ ಮೇಲ್ಬಾಗದಲ್ಲಿನ ಸಿಮೆಂಟ್ ಶೀಟ್ ಮೇಲ್ಪಾವಣಿ ಸಂಪೂರ್ಣ ಹಾರಿ ಹೋಗಿತ್ತು. ತಾಯಿ ಮಕ್ಕಳು ಮಲಗಿದ್ದ ಕೊಠಡಿ, ಮಂಚ, ಕಿಟಕಿ ಸಂಪೂರ್ಣ ಛಿದ್ರಗೊಂಡು ಸುಟ್ಟು ಕರಕಲಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ ಬಿಡುಗಡೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ…

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು!!

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ…