tamanvi
ಕರಾವಳಿ

ಕಾರ್ಕಳ: ಹೊತ್ತಿ ಉರಿದ ಟೂರಿಸ್ಟ್ ಬಸ್; ಪ್ರಯಾಣಿಕರು ಅಪಾಯದಿಂದ ಪಾರು!!

ಟೂರಿಸ್ಟ್ (ಟಿಟಿ) ವಾಹನವೊಂದು ಹೊತ್ತಿ ಉರಿದ ಘಟನೆ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಾರ್ಕಳ: ಟೂರಿಸ್ಟ್ (ಟಿಟಿ) ವಾಹನವೊಂದು ಹೊತ್ತಿ ಉರಿದ ಘಟನೆ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ನಡೆದಿದೆ.

ಉಡುಪಿಯಿಂದ ಮಾಳ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ. ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ವಾಲೆಗೆ ವಾಹನ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.

ಕಾರ್ಕಳ ಅಗ್ನಿಶಾಮಕ ಠಾಣೆ ತಂಡವು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.

ಕಾರ್ಕಳ ಅಗ್ನಿ ಶಾಮಕದಳ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖ‌ರ್, ಪ್ರಮುಖರಾದ ನಿತ್ಯಾನಂದ, ಜಯ, ಮುಜಾಂಬಿಲ್ ಕಾರ್ಯಾಚರಣೆ ತಂಡದಲ್ಲಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…